ನಮ್ಮರಾಜ್ಯ

ಪಕ್ಷ, ಧರ್ಮದ ಭೇದಬಿಟ್ಟು ಕೊರೊನಾ ತಡೆಗೆ ಒಗ್ಗಟ್ಟು ಪ್ರದರ್ಶಿಸಿ

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನೇ ಆವರಿಸಿದ್ದು ಇದು ಮನುಕುಲಕ್ಕೆ ಅಪಾಯ ತಂದೊಡ್ಡಿದೆ. ಹೀಗಾಗಿ ನಾವೆಲ್ಲರೂ ಪಕ್ಷ, ಧರ್ಮದ ವ್ಯತ್ಯಾಸವನ್ನು ಬದಿಗೆ ಸಿರಿಸಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡುವ ಮೂಲಕ ಈ ಮಹಾಮಾರಿಯನ್ನು ತಡೆಯಬೇಕಿದೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸೋಮವಾರ  ನಡೆದ ಪಕ್ಷದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವಮಾರಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ನಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಜವಾಬ್ದಾರಿ ನಿಭಾಯಿಸಿದ ಎಲ್ಲಾ ಮಾಜಿ ಸಚಿವರು, ವೈದ್ಯ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಒಳಗೊಂಡು ಸಮಿತಿ ರಚಿಸಿದ್ದೇವೆ ಎಂದು ತಿಳಿಸಿದರು.

ಸಮಿತಿಯಲ್ಲಿರುವ ಎಲ್ಲಾ ಸದಸ್ಯರು ಸೇರಿ ಚರ್ಚಿಸಿದ ನಂತರ ಅವರು ವಿವಿಧ ವಿಭಾಗಗಳನ್ನು ಮಾಡಿಕೊಂಡು ಈ ಪರಿಸ್ಥಿತಿಯನ್ನು ಯಾವ ರೀತಿ ಎದುರಿಸಬೇಕು ಎಂದು ಸಲಹೆ ನೀಡುತ್ತಿದ್ದಾರೆ. ಅದರಂತೆ ನಾವು ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಹೋರಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯ ಮಟ್ಟದ ವಾರ್ ರೂಮ್ ಅನ್ನು ಶಾಸಕ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಆರಂಭಿಸಿದ್ದು, ಅವರು ಪ್ರತಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಾರ್ ರೂಮ್ ರಚನೆ ಮಾಡಿಸಿ. ಜನರ ಸಮಸ್ಯೆ ಹಾಗೂ ಅಹವಾಲು ಸ್ವೀಕರಿಸಿ, ನಂತರ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಅಗತ್ಯವಿರುವ ಜನರಿಗೆ ಸಹಾಯ, ಆಹಾರ ವಿತರಣೆ ಸೇರಿದಂತೆ ಆರೋಗ್ಯ ರಕ್ಷಣೆಗೆ ಬೇಕಾಗಿರುವ ಸಾಮಗ್ರಿ ಹಂಚುತ್ತಿದ್ದಾರೆ ಎಂದರು.

ಸರ್ಕಾರೇತ್ತರ ಸಂಸ್ಥೆಗಳು, ಸಂಘಟನೆಗಳು ಏನನ್ನೂ ಅಪೇಕ್ಷಿಸದೇ ಮಾನವೀಯ ಸೇವೆ ನೀಡುತ್ತಿವೆ. ಇವುಗಳ ಜತೆಗೆ ಆರೋಗ್ಯ, ಪೊಲೀಸ್, ಪೌರ ಕಾರ್ಮಿಕರು ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳ ಸಿಬ್ಬಂದಿ ಶ್ರಮಿಸುತ್ತಿದ್ದು ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ನಾವು ಈ ಸಮಯದಲ್ಲಿ ರಾಜಕಾರಣ ಮಾಡುವುದರಲ್ಲಿ ಅರ್ಥವಿಲ್ಲ. ವಿಎಚ್ ಪಿ, ಆರೆಎಸ್‌ಎಸ್‌ಸೇರಿದಂತೆ ಇತರೆ ಸಂಘಟನೆಗಳು ಒಂದೊಂದು ಹೇಳಿಕೆ ನೀಡುತ್ತಿರಬಹುದು. ಮತ್ತೆ ಕೆಲವರು ತಪ್ಪು ಮಾಹಿತಿ ಹರಿಬಿಟ್ಟು ಅಭಿಯಾನ ಮಾಡುತ್ತಿರುವುದನ್ನು ಗಮನಿಸಿದ್ದೇವೆ. ದಯವಿಟ್ಟು ಇದನ್ನು ನಿಯಂತ್ರಣ ಮಾಡಿ. ಪಕ್ಷ, ಧರ್ಮ ಎಲ್ಲ ವ್ಯತ್ಯಾಸ ಬಿಟ್ಟು ಮಾನವ ಸೇವೆಗೆ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದ್ದು ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸೋಣ ಎಂದು ಕಿವಿ ಮಾತು ಹೇಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ