ಬೆಂಗಳೂರು: ಬಿಸಿಲಿನ ಬೇಗೆಗೆ ಕಂಗೆಟ್ಟಿರುವ ನಾಡಿನ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗಿದ್ದು, ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ.
ಈ ನಡುವೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ರಾಜ್ಯದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.