Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಸಾತ್ವಿಕ್ : ಬದುಕಿ ಬಾ ಕಂದ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದ ಕಂದ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದೆ. 16 ಅಡಿಯ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಸಾತ್ವಿಕ್​ಗಾಗಿ ರಾಜ್ಯಾದ್ಯಂತ ಜನರ ಮನ ಮಿಡಿಯುತ್ತಿದೆ.

ಅಗ್ನಿಶಾಮಕ ದಳ, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರೂ ರಾತ್ರಿ ಇಡೀ ಕಣ್ಣಿಗೆ ನಿದ್ದೆ ಇಲ್ಲದೇ ಸಾತ್ವಿಕ್​ನ ರಕ್ಷಣೆಯಲ್ಲಿ ತೊಡಗಿದ್ದಾರೆ. ಸದ್ಯ ಇದರ ನಡುವೆ ಕ್ಯಾಮೆರಾದಲ್ಲಿ ಕಂದನ ಕಾಲುಗಳು ಸೆರೆಯಾಗಿವೆ.

ಮಗುವಿಗೆ ಉಸಿರಾಟದ ಸಮಸ್ಯೆಯಾಗದಂತೆ ಅಧಿಕಾರಿಗಳು ನಿರಂತರವಾಗಿ ಆಕ್ಸಿಜನ್​ ಪೂರೈಕೆ ಮಾಡುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಮಗುವಿನ ಮೇಲೆ ಮಣ್ಣು ಬಿದ್ದಿದೆ. ಎಲ್ಲವನ್ನೂ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗಿದ್ದು, ಮಗುವಿನ ಚಲನವಲನ ಸೆರೆಯಾಗಿದೆ.

ಮಗುವಿನ ಎರಡು ಕಾಲುಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು ಕಾಲುಗಳು ಅಲ್ಲಾಡುತ್ತಿವೆ. ಆದಷ್ಟು ಬೇಗ ಮಗು ಹೊರಗೆ ಬರಲೆಂದು ಕುಟುಂಬಸ್ಥರು ಸೇರಿ ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಬದುಕು ಸಾವಿನ ಮಧ್ಯೆ ಹೋರಾಡುತ್ತಿರುವ ಮಗುವಿನ ರಕ್ಷಣೆಗಾಗಿ ಕಾರ್ಯಚರಣೆ ಮುಂದುವರಿದಿದ್ದು, ರಕ್ಷಣಾ ಕಾರ್ಯದ ವೇಳೆ ಮಗುವಿನ ಮೇಲೆ ಮಣ್ಣು ಬಿದ್ದಿದೆ. ಕೊಳವೆ ಬಾವಿಯ 16 ಅಡಿಯಲ್ಲಿ ಮಗು ಸಿಲುಕಿದ್ದು, ಅಕ್ಕಪಕ್ಕದಲ್ಲಿ ಮಣ್ಣು ತೆರೆವುಗೊಳಿಸಿ ಮಗುವನ್ನ ಹೊರ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?