ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಿಡದಿ ಘಟಕದಲ್ಲಿ ಎಲೆಕ್ಟ್ರಿಕ್ ಬಸ್ಸೊಂದು ಆಕಸ್ಮಿಕ ಬೆಂಕಿಬಿದ್ದು ಹೊತ್ತಿ ಉರಿದ ಘಟನೆ ನಡೆದಿದೆ.
ಇಂದು (ಏ.5) ಮಧ್ಯಾಹ್ನ ಬಿಎಂಟಿಸಿ ಬಿಡದಿ 49ನೇ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಸದ್ಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಬಸ್ ಆಪಾರ ಹಾನಿಗೊಳಗಾಗದೆ ಬಚಾವ್ ಆಗಿದೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಘಟಕದಲ್ಲಿದ್ದ ಸಿಬ್ಬಂದಿ ಕೂಡಲೇ ಕಾರ್ಬನ್ ಡೈಆಕ್ಸೈಡ್ ಅನಿಲ ಬಳಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇಲ್ಲದಿದ್ದರೆ ಈ ಬಸ್‌ನ ಜತೆಗೆ ಇತರ ಬಸ್‌ಗಳು ಮತ್ತು ಸ್ವಲ್ಪ ದೂರದಲ್ಲೇ ನಿಲ್ಲಿಸಿದ್ದ ಬೈಕ್‌ಗಳು ಕೂಡ ಬೆಂಕಿಗೆ ಆಹುತಿಯಾಗುತ್ತಿದ್ದವು ಎಂದು ಸ್ಥಳದಲ್ಲೇ ಇದ್ದ ಸಿಬ್ಬಂದಿ ತಿಳಿಸಿದ್ದಾರೆ.
ಇನ್ನು ಘಟಕದಲ್ಲಿ ನಿಂತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದರೆ ಯಾರೋ ಸಿಗರೇಟ್ ಸೇದಿ ಅದರ ಅದರ ತುಂಡನ್ನು ಬಿಸಾಗಿಕ್ಕಿದ್ದರಿಂದ ಈ ಅವಘಡ ಸಂಭವಿಸರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೆ ತಿಳಿದು ಬರಬೇಕಿದೆ.