NEWSನಮ್ಮಜಿಲ್ಲೆರಾಜಕೀಯ

ಅನ್ನವೂ ಹಳಸಿತ್ತು- ನಾಯಿಯೂ ಹಸಿದಿತ್ತು : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಬಿಜೆಪಿಗೆ ಸೋಲಿನ ಭಯ ಎದುರಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು ಇವರ ಈ ಸ್ಥಿತಿ ನಾಯಿ ಹಸಿದಿತ್ತು -ಅನ್ನ ಅನಿಸಿತ್ತು ಎನ್ನುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪಟ್ಟಣದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಜನಧ್ವನಿ ಸಮಾವೇಶದಲ್ಲಿ ಮಾತನಾಡಿದರು. ಸೆಕ್ಯುಲರ್ ಹೆಸರಿಟ್ಟುಕೊಂಡು ಬಿಜೆಪಿ ಜತೆ ಬೆರೆತಿರುವ ಜೆಡಿಎಸ್‌ಗೆ ಮಾನ ಮರ್ಯಾದೆ ಇದೆಯಾ? ಕೇವಲ ಕುಟುಂಬದ ಹಿತಾಸಕ್ತಿಗಾಗಿ ಯಾರ ಜತೆಗೆ ಬೇಕಾದರೂ ಹೋಗಲು ಜೆಡಿಎಸ್ ರೆಡಿಯಾಗಿ ಬಿಡುತ್ತದೆ. ಯಾವುದೇ ಸಿದ್ದಾಂತ ಇಲ್ಲ, ಜನಪರವಾದ ಬದ್ಧತೆ ಇಲ್ಲ, ರಾಜ್ಯದಲ್ಲಿ ಜೆಡಿಎಸ್ ಸುತ್ತು ಹೋಗಿದೆ ಹಾಗಾಗಿ ಅಳಿಯ ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ. ಇದು ನ್ಯಾಯನಾ ಸ್ವಾಮಿ, ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರೀನಾ ಸ್ವಾಮಿ ಎಂದು ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದ ಅವರು ನೀವು ಕೊಟ್ಟ ಮಾತನ್ನಂತೂ ಉಳಿಸಿಕೊಳ್ಳಲಿಲ್ಲ.

ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಶ್ರಮಿಕರು, ಸಣ್ಣ-ಮಧ್ಯಮ ಉದ್ಯಮಿಗಳಿಗೆ, ಯುವ ಜನರ ಭವಿಷ್ಯಕ್ಕೆ ಒಂದೇ ಒಂದು, ಬರೀ ಒಂದೇ ಒಂದು ಕಾರ್ಯಕ್ರಮವನ್ನೂ ಸಮರ್ಪಕವಾಗಿ ಜಾರಿ ಮಾಡಲಿಲ್ಲ. ಚಂದಕ್ಕೆ ಹತ್ತತ್ತು ವರ್ಷ ಪ್ರಧಾನಿಯಾಗಬೇಕಿತ್ತಾ ಮೋದಿಯವರೇ? ಪ್ರಧಾನಿಯಾಗಿ ಸುಳ್ಳು ಹೇಳ್ಕಂಡು ತಿರುಗಿದ್ರೆ ಭಾರತೀಯರಿಗೆ ನಂಬಿಸಿ ಮೋಸ ಮಾಡಿದಂಗಲ್ವಾ ಸ್ವಾಮಿ ಎಂದು ಸಿಎಂ ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಾತನಾಡಿ, ಕಾಂಗ್ರೆಸ್ ಸರ್ವ ಜನಾಂಗದ ಪಕ್ಷ, ಮೈಸೂರು ಲೋಕಸಭಾ ಕ್ಷೇತ್ರಕ್ಕೆ 45 ವರ್ಷಗಳ ನಂತರ ಒಕ್ಕಲಿಗ ಸಮಾಜಕ್ಕೆ ಟಿಕೆಟ್ ನೀಡಿದೆ ಅದಲ್ಲದೆ ರಾಜ್ಯದಲ್ಲಿ ಸುಮಾರು 8 ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದ್ದರಿಂದ ನಮ್ಮ ಅಭ್ಯರ್ಥಿಗಳ ಪರವಾಗಿ ಪ್ರತಿಯೊಬ್ಬರು ಪಣತೊಟ್ಟು ಕೆಲಸ ಮಾಡಬೇಕಿದೆ.

ಬಿಜೆಪಿ ಬರೀ ಸುಳ್ಳು ಹೇಳುತ್ತಿದ್ದು ರೈತರಿಗೆ ಸಂಬಳ ಇಲ್ಲ ವೇತನ ಇಲ್ಲ ಆದಾಯವು ಇಲ್ಲ ಏತಕ್ಕಾಗಿ ಅವರ ಪರ ಮತ ನೀಡಬೇಕು ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನ ನೀಡಿದ್ದು ಪ್ರತಿಯೊಬ್ಬರ ಮನೆಯ ಬೆಳಕನ್ನು ಮಾಡಿದ್ದೇವೆ. ಅದಲ್ಲದೆ ಎಲ್ಲ ದೇವಸ್ಥಾನದ ಹುಂಡಿಗಳನ್ನು ಹಣ ಹೆಚ್ಚಾಗಿದ್ದು ವೀರೇಂದ್ರ ಹೆಗ್ಡೆಯವರು ನನಗೆ ಪತ್ರ ಬರೆದು ನಿಮ್ಮ ಗ್ಯಾರೆಂಟಿಯಿಂದ ನಮ್ಮ ದೇವಸ್ಥಾನದ ಉಂಡಿಯ ಹಣ ಹೆಚ್ಚಾಗಿದೆ ಎಂದರು.

ತಮ್ಮ ಕುಟುಂಬದ ಅಸ್ತಿತ್ವಕ್ಕಾಗಿ ರಾಮನಗರದಲ್ಲಿ ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಸಮಾದಿ ಕಟ್ಟಿ ಜೆಡಿಎಸ್ ಕಾರ್ಯಕರ್ತರು ಅನಾಥರನ್ನಾಗಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೆ ನಮ್ಮೊಡನೆ ಬನ್ನಿ ನಿಮ್ಮ ರಕ್ಷಣೆಗೆ ನಾವಿದ್ದೇವೆ. ಜೆಡಿಎಸ್ ಕಾರ್ಯಕರ್ತರಿಗೂ ಏನೇ ಇರಲಿ ನಿಮ್ಮ ರಕ್ಷಣೆಗೆ ನಾವಿದ್ದೇವೆ. ನೀವು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದರು.

ಸಚಿವ ಕೆ.ವೆಂಕಟೇಶ್ ಮಾತನಾಡಿ, ಪ್ರತಿ ಲೋಕಸಭಾ ಚುನಾವಣೆ ವೇಳೆಯಲ್ಲಿ ಪಿರಿಯಾಪಟ್ಟಣ ತಾಲೂಕಿನಿಂದ ಅತ್ಯಧಿಕ ಮತಗಳನ್ನು ನೀಡುತ್ತಿದ್ದು ಈ ಬಾರಿ 50, ಸಾವಿರಕ್ಕೂ ಅಧಿಕ ಮತಗಳ ಲೀಡನ್ನು ಕಾಂಗ್ರೆಸ್‌ಗೆ ನೀಡಬೇಕಾಗಿ ಮನವಿ ಮಾಡಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಕರ್ನಾಟಕದ ಸಮಸ್ಯೆಗಳನ್ನು ಕೇಂದ್ರದಲ್ಲಿ ಅದರ ಬಗ್ಗೆ ಕೂಲಂಕುಶವಾಗಿ ಬೆಳಕು ಚೆಲುವಂತ ನಾಯಕರು ನಮಗೆ ಬೇಕಿದ್ದು ಅಂಥವರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳಿಸಬೇಕಾಗಿರುವ ಜವಾಬ್ದಾರಿ ನಮ್ಮ ಮೇಲೆ ಇದು ಅದರ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಹೊರಬಾಕಿದೆ ಎಂದರು.

ಕೆಪಿಸಿಸಿ ಕಾರ್ಯಧ್ಯಕ್ಷ ತನ್ವೀರ್ ಸೇಠ್, ಜಿಲ್ಲಾಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್ ಶಾಸಕರಾದ ಡಾ. ತಿಮ್ಮಯ್ಯ , ರಾಜ್ಯ ವಕ್ತಾರೆ ಯುಟಿ ಪರ್ಜಾನ ,ಪುಷ್ಪ ಅಮರನಾಥ್, ಮಾಜಿ ಶಾಸಕ ಭಾರತೀಯ ಶಂಕರ್, ಮುಖಂಡರಾದ ಸಂಜಯ್, ಮಂಜುನಾಥ್, ನಿತಿನ್ ವೆಂಕಟೇಶ್ , ಅನಿಲ್ ಕುಮಾರ್, ಡಿ.ಟಿ.ಸ್ವಾಮಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ