NEWSನಮ್ಮರಾಜ್ಯರಾಜಕೀಯ

ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೇಹಾ ಹಿರೇಮಠ ಅವರ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಉಪಯೋಗಿಸಿ ಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಕಿಡಿಕಾರಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏನೂ ಕೆಲಸಗಳನ್ನು ಮಾಡದೆ 40% ಕಮಿಷನ್ ಲೂಟಿಯಲ್ಲೇ ಮೈಮರೆತ್ತಿದ್ದ ಬಿಜೆಪಿ ನಾಯಕರು ಧರ್ಮ ದ್ವೇಷಗಳನ್ನು ಮುನ್ನೆಲೆ ತರುತ್ತಿದ್ದಾರೆ. ಎಲ್ಲೆ ಕೊಲೆಯಾಗಲಿ ಹಂತಕ ಮುಸಲ್ಮಾನನಾಗಿದ್ದರೆ ರಣಹದ್ದುಗಳಂತೆ ಮುಗಿಬೀಳುತ್ತಾರೆ. ಹಂತಕ ಹಿಂದೂ ಆಗಿದ್ದರೆ ಅತ್ತ ತಿರುಗಿಯೂ ನೋಡುವುದಿಲ್ಲ. ಇಂತಹ ಅಪಾಯಕಾರಿ ಬಿಜೆಪಿಗರನ್ನು ಕನ್ನಡಿಗರು ನಂಬಬಾರದು ಎಂದು ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಇಡೀ ಕರ್ನಾಟಕಕ್ಕೆ ಕಪ್ಪುಚುಕ್ಕೆ. ಇಂತಹ ಕೃತ್ಯಗಳನ್ನು ಆಮ್ ಆದ್ಮಿ ಪಾರ್ಟಿ ಯಾವುದೇ ಕಾರಣಕ್ಕೂ ಒಪ್ಪಲ್ಲ, ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಮಹಿಳೆಯರಿಗೆ ರಕ್ಷಣೆ ನೀಡುವ ಕಾನೂನು ತಿದ್ದುಪಡಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನ ಕೊಡಬೇಕು. ದೆಹಲಿಯಲ್ಲಿ ನಿರ್ಭಯಾ ಹತ್ಯೆ ಪ್ರಕರಣದ ಬಳಿಕ, ಆಮ್ ಆದ್ಮಿ ಪಾರ್ಟಿ ಅದನ್ನು ಗಂಭೀರವಾಗಿ ಪರಿಗಣಿಸಿ ನಿರ್ಭಯಾ ಕಾನೂನು ರಚನೆ ಮಾಡಿದೆ. ಈ ಕಾನೂನು ರಚನೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪಾತ್ರ ಪ್ರಮುಖವಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬಿಜೆಪಿಗೆ ಯಾವುದೇ ವಿಷಯ ಇಲ್ಲ, ಅದಕ್ಕಾಗಿ ಇಂತಹ ಪ್ರಕರಣಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ನಿರುದ್ಯೋಗ, ಬಡತನ, ಹಣದುಬ್ಬರ, ರೂಪಾಯಿ ಅಪಮೌಲ್ಯ, ಬರಪರಿಹಾರ ಬಿಡುಗಡೆ ಮಾಡದೆ ದರ್ಪ ತೋರಿರುವುದು, ಸಂವಿಧಾನ ವಿರೋಧಿ ನೀತಿಗಳು, ಮೋದಿ ಅವರ ನಿರಂಕುಶ ಪ್ರಭುತ್ವವನ್ನು ಜನರಿಗೆ ತಿಳಿಸಲಾಗದೆ ಎಂದರು.

ಇನ್ನು ಬಿಜೆಪಿ ನಾಯಕರು ನೇಹಾಳ ಕೊಲೆ ವಿಚಾರವನ್ನು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿದ್ದಾರೆ. ಕೋಮು ಧ್ರುವೀಕರಣ, ದಂಗೆ, ಹತ್ಯೆಗಳ ಮೇಲೆಯೇ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ. ಮತದಾರರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ರಾಜಕೀಯ ನಾಯಕರ ಪ್ರಚೋದನೆಗೆ ಒಳಗಾಗದೆ ಮತ ನೀಡಬೇಕು ಎಂದು ಜಗದೀಶ್ ಸದಂ ಮನವಿ ಮಾಡಿದರು.

ಆಮ್ ಆದ್ಮಿ ಪಾರ್ಟಿ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ಮಾತನಾಡಿ, ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣ ಅಕ್ಷಮ್ಯ, ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಮತ್ತು ದೇಶದಲ್ಲಿ ಮಹಿಳೆಯರ ರಕ್ಷಣೆಗೆ ಸರ್ಕಾರಗಳು ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.

ಎಲ್ಲ ಭ್ರಷ್ಟರಿಗೂ, ಅತ್ಯಾಚಾರಿಗಳಿಗೆ ಬಿಜೆಪಿಯೇ ಆಸರೆ ನೀಡುತ್ತಿದೆ. ಅವರು ಭ್ರಷ್ಟಾಚಾರ ಮತ್ತು ಮಹಿಳಾ ನ್ಯಾಯದ ಬಗ್ಗೆ ಮಾತನಾಡುವುದೇ ಹಾಸ್ಯಾಸ್ಪದ ಎಂದು ಹೇಳಿದರು. ಜನ ಬಿಜೆಪಿಯ ಕೋಮು ದ್ವೇಷದ ಭಾಷಣಕ್ಕೆ ಮರುಳಾಗದೆ, ಯೋಚಿಸಿ ಮತ ಚಲಾವಣೆ ಮಾಡಬೇಕು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?