ಮಧ್ಯಪ್ರದೇಶ: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇದರ ಜತೆಗೆ ಬಿಜೆಪಿಗೆ ಅವರು ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್‌ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ” ಎಂದು ಹಿಂದಿಯಲ್ಲಿ ವಿಜಯವರ್ಗಿಯ ಎಕ್ಸ್ ಮಾಡಿದ್ದಾರೆ.
ಇದೀಗ ಸೂರತ್ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕನ ಈ ನಡೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.
ಶುಕ್ರವಾರ, ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ ಸೊರೊ ಶಾಸಕ ಪರಶುರಾಮ್ ಧಾಡಾ ಬಿಜೆಪಿಗೆ ಮತ್ತೆ ಬಂದಿದ್ದಾರೆ. ಆ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ ಏಪ್ರಿಲ್ 27 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಖ್ಖರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸಹಾಯ ಮಾಡಲು ಸರ್ಕಾರ ಕೈಗೊಂಡಿರುವ ಹಲವಾರು ಕ್ರಮಗಳನ್ನು ಉಲ್ಲೇಖಿಸಿದ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ, ಯಾರಾದರೂ ನಿಜವಾಗಿಯೂ ಈ ಸಮುದಾಯಕ್ಕಾಗಿ ಕೆಲಸ ಮಾಡಿದ್ದರೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಎಂದು ಹೇಳಿದ್ದಾರೆ.
ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಸೂರತ್‌ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.
ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದಂತಾಗಿದೆ. ನಿನ್ನೆ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ಕೂಡ ರದ್ದಾಗಿತ್ತು. ಅದರ ನಂತರ ಎಲ್ಲ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು, ಹಾಗಾಗಿ ಮುಖೇಶ್ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.