Please assign a menu to the primary menu location under menu

NEWSಉದ್ಯೋಗನಮ್ಮರಾಜ್ಯ

ಉಚಿತ ಮೊಬೈಲ್‌ರಿಪೇರಿ & ಸೇವೆ ತರಬೇತಿಗೆ ಮೇ 8 ರಂದು ನೇರ ಸಂದರ್ಶನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ಕಾರ್ಡ್‌ಅಥವಾ ಜಾಬ್‌ಕಾರ್ಡ್‌ಹಾಗೂ ಆಧಾರ್‌ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಧಿಕಾರಿಗಳ ಬಗ್ಗು ಬಡಿಯಲು "ದಂಡಂ ದಶಗುಣಂ": EPS ಪಿಂಚಣಿದಾರರ ಎಚ್ಚರಿಕೆ ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯೊಳಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ಸಾರಿಗೆ ಬಸ್‌-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ