ದೊಡ್ಡಬಳ್ಳಾಪುರ: ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗಿನ ಉಪಾಹಾರವನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ವಿತರಿಸುವ ಮೂಲಕ ಬಡವರ ಹಸಿವು ನೀಗಿಸಿದರು.
ಕೊರೋನಾ ವೈರಾಣು ಸೋಂಕು ಹರಡದಂತೆ ಲಾಕ್ ಡೌನ್ ಆದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜಾರಿಯಲ್ಲಿರುವ ಹಿನ್ನೆಲೆ, ಕ್ಯಾಂಟೀನ್ ಭೇಟಿ ನೀಡಿದ ಜಿಲ್ಲಾಧಿಕಾರಿ ಆಹಾರವನ್ನು ಪರಿಶೀಲಿಸಿದ ನಂತರ ಸಾರ್ವಜನಿಕರಿಗೆ ವಿತರಿಸಿದರು.
ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ದಿನದಿಂದ ದಿನಕ್ಕೆ ಮಹಾಮಾರಿ ಎಲ್ಲೆಡೆಯೂ ಆವರಿಸುತ್ತಿದೆ. ಆದ್ದರಿಂದ ಅಕ್ಕಪಕ್ಕದ ಮನೆಯವರು ಪರ ಸ್ಥಳಗಳಿಗೆ ಹೋಗಿ ಬಂದಿದ್ದರೆ ಅವರ ವಿವರವನ್ನು ಕೊಡಿ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿ ಪರೀಕ್ಷಿಸಲಿದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕು ತಹಸೀಲ್ದಾರ್ ಶಿವರಾಜು, ನಗರಸಭೆ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.