CrimeNEWSಶಿಕ್ಷಣ-

ಸೋಮವಾರಪೇಟೆ: ಎಸ್ಸೆಸ್ಸೆಲ್ಸಿ ಪಾಸಾದ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿ ಭೀಕರ ಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಸೋಮವಾರಪೇಟೆ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾದ ಸಂಭ್ರಮದಲ್ಲಿ ಇರುವಾಗಲೇ ವಿದ್ಯಾರ್ಥಿನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದ 32 ವರ್ಷದ ಓಂಕಾರಾಪ್ಪ ಕೊಲೆ ಆರೋಪಿ. ಸೂರಬ್ಬಿ ಪ್ರೌಢಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಯು.ಎಸ್.ಮೀನಾ (16) ಹತ್ಯೆಗೀಡಾದ ವಿದ್ಯಾರ್ಥಿನಿ. ಆರೋಪಿ ಮಚ್ಚಿನಿಂದ ಆಕೆಯ ರುಂಡ ಮತ್ತು ಮುಂಡ ಬೇರ್ಪಡಿಸಿದ್ದು, ರುಂಡವನ್ನು ಹೊತ್ತೊಯ್ದಿದ್ದಾನೆ.

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಕೆಲವೇ ಸಮಯದಲ್ಲಿ ಈ ಘಟನೆ ನಡೆದಿದೆ. ಸೂರ್ಲಬ್ಬಿ ಶಾಲೆಯ ಏಕೈಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ಮೀನಾ ಉತ್ತೀರ್ಣಳಾಗಿದ್ದು ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ಬಾಲಕಿಗೂ 32 ವರ್ಷದ ಆರೋಪಿಗೂ ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಗುರುವಾರ ಇಬ್ಬರ ಮದುವೆ ನಿಶ್ಚಿತಾರ್ಥ ಕೂಡ ನಡೆಯಬೇಕಿತ್ತು. ಆದರೆ, ಈ ವಿಷಯತ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ತಡೆದಿದ್ದರು. ಬಾಲ್ಯ ವಿವಾಹ ಮಾಡದಂತೆ ಪೋಷಕರ ಮನವೊಲಿಸಿದ್ದರು.

ಆದರೆ ಸಂಜೆ ವಿದ್ಯಾರ್ಥಿನಿಯ ಮನೆಗೆ ನುಗ್ಗಿದ ದುಷ್ಕರ್ಮಿ ಬಾಲಕಿಯನ್ನು ಪಾಲಕರ ಎದುರೆ ಅಪಹರಿಸಿ ಕಾಡಂಚಿನ ಪ್ರದೇಶದಲ್ಲಿ ಆಕೆಯನ್ನು ಕೊಂದು ದೇಹವನ್ನು ಅಲ್ಲಿಯೇ ಬಿಟ್ಟು ರುಂಡದೊಂದಿಗೆ ಪರಾರಿಯಾಗಿದ್ದಾನೆ.

ಶ್ವಾನದಳ, ವಿಧಿ ವಿಜ್ಞಾನ ತಂಡ ಭೇಟಿ: ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಸ್ವಲ್ಪ ದೂರದಲ್ಲಿ ಮಚ್ಚು ಪತ್ತೆಯಾಗಿದ್ದು, ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ