CrimeNEWSನಮ್ಮಜಿಲ್ಲೆ

ಪ್ರೀತಿ ನಿರಾಕರಿಸಿದ ಪ್ರಿಯತಮನ ಕುಟುಂಬ ಮನನೊಂದು UPSCಗೆ ಸಿದ್ಧತೆ ನಡೆಸುತ್ತಿದ್ದ ಯುವತಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದು, ಆ ಪ್ರೀತಿಯನ್ನು ಪ್ರಿಯತಮನ ಕುಟುಂಬ ನಿರಾಕರಿಸಿದ್ದಕ್ಕೆ ಮನನೊಂದ UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಹೊರವಲಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪುಷ್ಪಾ ಯಲ್ಲಾಲಿಂಗ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದಳು. UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದಳು.

UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರ ನಡುವೆಯೇ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಇನ್ನು ಕೆಲ ದಿನಗಳಿಂದ ಪುಷ್ಪಾ ಮದುವೆ ಆಗೋಣ ಎಂದು ಕಿರಣ್‌ಗೆ ಒತ್ತಾಯ ಮಾಡಿದ್ದಾಳೆ. ಆದರೆ ಕಿರಣ್​ ಮನೆಯವರು ಅನ್ಯ ಜಾತಿ ಯುವತಿ ಎಂದು ಮದುವೆಯನ್ನು ನಿರಾಕರಿಸಿದ್ದಾರೆ. ಮನೆಯವರು ನಿರಾಕರಿಸಿದ್ದರಿಂದ ಯುವಕ ಕೂಡ ಒಪ್ಪಿಲ್ಲ.

ಆದರೆ ಈಗಲೇ ಮದುವೆ ಬೇಡವೆಂದು ಕಿರಣ್ ಪುಷ್ಪಾಳ ಮನವೊಲಿಸಲು ಮುಂದಾಗಿದ್ದನು. ಇದರಿಂದ ಮನನೊಂದು ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

ಆತ್ಮಹತ್ಯೆ ಸಂಬಂಧ ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿಲದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು