NEWSನಮ್ಮಜಿಲ್ಲೆ

170 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಅನುಮೋದನೆ 

96 ಕಾಮಗಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಒಪ್ಪಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ 170 ಲಕ್ಷ ರೂ. ವೆಚ್ಚದಲ್ಲಿ 96 ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ  ಅಧ್ಯಕ್ಷತೆಯಲ್ಲಿ ಬುಧವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಬರಪೀಡಿತ ತಾಲೂಕುಗಳಿಗೆ ಮೊದಲ ಕಂತಿನಲ್ಲಿ 50 ಲಕ್ಷ ರೂ. ಹಾಗೂ ಎರಡನೇ ಕಂತಿನಲ್ಲಿ 25 ಲಕ್ಷ ರೂ. ನೀಡಲಾಗಿರುತ್ತದೆ. ಉಳಿದ ತಾಲೂಕುಗಳಿಗೆ ಎರಡು ಕಂತಿನಲ್ಲೂ ತಲಾ 10 ಲಕ್ಷ ರೂ. ನೀಡಲಾಗಿರುತ್ತದೆ.

ಮೊದಲ ಕಂತಿನಲ್ಲಿ ನೀಡಲಾಗಿರುವ ಅನುದಾನದಲ್ಲಿ ರಾಮನಗರ ತಾಲೂಕಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 26 ಕಾಮಗಾರಿಗಳನ್ನು, ಕನಕಪುರ ತಾಲೂಕಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 25 ಕಾಮಗಾರಿಗಳನ್ನು, ಮಾಗಡಿ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿಗಳನ್ನು, ಚನ್ನಪಟ್ಟಣ ತಾಲೂಕಿನಲ್ಲಿ 10 ಲಕ್ಷ ರೂ.ಗಳ ವೆಚ್ಚದಲ್ಲಿ 5 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಯಿತು.

ಎರಡನೇ ಕಂತಿನಲ್ಲಿ ನೀಡಲಾಗಿರುವ ಅನುದಾನದಲ್ಲಿ ರಾಮನಗರ ತಾಲ್ಲೂಕಿನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ 12 ಕಾಮಗಾರಿ, ಕನಕಪುರ ತಾಲೂಕಿನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ 13 ಕಾಮಗಾರಿ, ಮಾಗಡಿ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಯಿತು.

ಜಿಪಂ ಉಪಕಾರ್ಯದರ್ಶಿ ಉಮೇಶ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಸುಂದರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ  ಚಂದ್ರಹಾಸ್  ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್