NEWSನಮ್ಮರಾಜ್ಯ

ಲಾಕ್‌ಡೌನ್ ನಡುವೆಯು ರಕ್ತದಾನ ಮಾಡಿದ ಯುವ ಜನತೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಸಚಿವ ಸಿ.ಟಿ ರವಿ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ದೇಶಾದ್ಯಂತ ಲಾಕ್‌ಡೌನ್ ನಲ್ಲಿಯು ಜಿಲ್ಲೆಯಲ್ಲಿ ತುರ್ತು ಸಂದರ್ಭ ರಕ್ತನಿಧಿಗಳಲ್ಲಿ ರಕ್ತದ ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಸಂತಸ ವಿಷಯ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದರು.

ಬುಧವಾರ ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ರಂಗಣ್ಣನವರ ಛತ್ರದಲ್ಲಿ ಚಿಕ್ಕಮಗಳೂರು ಯುವಕರ ಸಂಘದಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರದಲ್ಲಿ ರಾಷ್ಟೋತ್ತನ ಬಳಗದಿಂದ ರಕ್ತದಾನ ಶಿಬಿರ ಮಾಡುವ ಸಂದೇಶ ಬಂದ ಹಿನ್ನೆಲೆ ಜಿಲ್ಲೆಯ ಯುವಕರ ಸಂಘವು ಇಂತಹ ಸಂಕಷ್ಟದ ತುರ್ತು ಸಂದರ್ಭದಲ್ಲಿಯೂ ಶಿಬಿರವನ್ನು ಏರ್ಪಡಿಸಿದ್ದು ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ರಕ್ತದಾನಿಗಳು ಭಾಗಿಯಾಗಿರುವುದು ಖುಷಿಯ ವಿಚಾರ ಎಂದರು.

ರಕ್ತದಾನ ಮಹಾದಾನವಾಗಿದ್ದು ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ರಕ್ತದಾನ ಶಿಬಿರವನ್ನು ಏರ್ಪಡಿಸುವುದು ಒಳಿತು. ಸಂಕಷ್ಟದ ಸಂದರ್ಭಗಳಲ್ಲಿ ಇಂತಹ ಶಿಬಿರಗಳು ಅನುಕೂಲವಾಗಲಿದ್ದು ಯಾವುದೇ ಸಮಯದಲ್ಲೂ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಮುರಳಿಧರ್ ಮಾತನಾಡಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಹೆಚ್ಚು ಜನರು ಒಂದೆಡೆ ಸೇರಬಾರದು ಎನ್ನುವ ಕಾರಣದಿಂದ ಕೆಲದಿನಗಳ ಕಾಲ ರಕ್ತದಾನ ಶಿಬಿರಗಳು ಸ್ಥಗಿತಗೊಂಡಿದ್ದವು ಇದೀಗ ಜಿಲ್ಲೆಯ ಯುವಕರ ಸಂಘ ಸ್ವಯಂ ಇಚ್ಚೆಯಿಂದ ರಕ್ತದಾನ ಶಿಬಿರ ಏರ್ಪಡಿಸಿರುವುದು ಒಳ್ಳೆಯ ಸಂಗತಿ ಎಂದ ಅವರು ರಕ್ತದ ಕೊರತೆ ಸಂದರ್ಭದಲ್ಲಿ ಇಂತಹ ಶಿಬಿರಗಳು ಹೆಚ್ಚು ಅನುಕೂಲವಾಗಲಿದ್ದು ಬಡವರು, ಸಂಕಷ್ಟದಲ್ಲಿರುವವರಿಗೆ ಮತ್ತಷ್ಟು ಪ್ರಯೋಜನವಾಗಲಿದೆ ಎಂದರು.

ರಕ್ತದಾನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಅಲ್ಲದೇ ಆರೋಗ್ಯ ಸ್ವಚ್ಚತೆಯ ಬಗ್ಗೆ ಹೆಚ್ಚು ಗಮನಹರಿಸಿ ಸೋಂಕು ಬರದಂತೆ ತಡೆಯಲು ಅರಿವು ಮೂಡಿಸಲಾಗಿದೆ ಎಂದರು.

ಸ್ವಯಂ ಸೇವಕರಾದ ಭರತ್, ರಘು, ಧನಂಜಯ್‌ಗೌಡ, ಪ್ರದೀಪ್‌ರಾಜ್  ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು