NEWSನಮ್ಮಜಿಲ್ಲೆಬೆಂಗಳೂರು

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ತಿಂಗಳಿನಲ್ಲಿ ಬೀಳುತ್ತಿರುವ ಸಣ್ಣ ಪ್ರಮಾಣದ ಮಳೆಗೇ ರಸ್ತೆಗಳಲ್ಲಿ ನೀರು ನಿಲ್ಲುತ್ತಿರುವುದು, ರಾಜ ಕಾಲುವೆಗಳು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ಪುನಃ ಎರಡು ವರ್ಷಗಳ ಹಿಂದಿನ ಭಾರಿ ನೆರೆ ಪರಿಸ್ಥಿತಿಯೇ ಬೆಂಗಳೂರಿಗೆ ಬಂದೊದಗಲಿದೆ ಎಂಬ ಆತಂಕ ಸೃಷ್ಟಿಯಾಗಿದೆ. ಕಾರಣ ಇನ್ನೂ ತೆರವಾಗದ ರಾಜಕಾಲುವೆ ಒತ್ತುವರಿ. ಹೀಗಾಗಿ ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಮೇನಲ್ಲಿ ಸುರಿಯುತ್ತಿರುವ ಅಲ್ಪಸ್ವಲ್ಪ ಮಳೆಯಿಂದ ತುಸು ನಿರಾಳರಾಗಿದ್ದಾರೆ. ಆದರೆ, ರಾಜಕಾಲುವೆಗಳ ಒತ್ತುವರಿಯಿಂದ ಆತಂಕ ಎದುರಾಗಿದೆ. ಆದ್ದರಿಂದ ಶೀಘ್ರವಾಗಿ ಒತ್ತುವರಿ ತೆರವುಗೊಳಿಸಬೇಕು, ನೆರೆ ಭೀತಿಯಿಂದ ಬೆಂಗಳೂರಿಗರನ್ನು ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಒತ್ತಾಯಿಸಿರುವ ಮುಖ್ಯಮಂತ್ರಿ ಚಂದ್ರು ಪತ್ರ ಬರೆಯುವ ಮೂಲಕ ತಾಕೀತು ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ ಐಟಿ ಹಬ್‌ ಮಹದೇವಪುರ ಕ್ಷೇತ್ರದ ಹೊರ ವರ್ತುಲ ರಸ್ತೆಯ ಎಕೋಸ್ಪೇಸ್‌, ರೈನ್‌ಬೋ ಡೈವ್‌ ಬಡಾವಣೆ, ಟಿ.ಝಡ್‌ ಅಪಾರ್ಟ್‌ಮೆಂಟ್‌ ಸೇರಿದಂತೆ ವಿವಿಧೆಡೆ ಭಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿತ್ತು. ಶಾಶ್ವತ ಪರಿಹಾರದ ನಿಟ್ಟಿನಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂದು ಎಎಪಿ ಸೇರಿದಂತೆ ಅನೇಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು.

ಅಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ವಿಳಂಬ ನೀತಿ ಅನುಸರಿಸಿದ ಕಾರಣಕ್ಕೆ ತಹಸೀಲ್ದಾರ್‌ ಒಬ್ಬರನ್ನು ಅಮಾನತುಗೊಳಿಸುವ ಮೂಲಕ ಅಂದಿನ ಬಿಜೆಪಿ ಸರ್ಕಾರ ಹೋರಾಟವನ್ನು ತಣಿಸುವ ಪ್ರಯತ್ನವನ್ನು ನಡೆಸಿತ್ತು. ಅಂದು ವಿಪಕ್ಷ ಸ್ಥಾನದಲ್ಲಿದ್ದ ನೀವು (ಕಾಂಗ್ರೆಸ್‌) ಒತ್ತುವರಿ ತೆರವುಗೊಳಿಸದೆ ಬೆಂಗಳೂರಿಗರ ಜೀವದ ಜತೆ ಚೆಲ್ಲಾಟವಾಡುತ್ತಿರುವ 40% ಕಮಿಷನ್‌ ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಪಾದಿಸಿದ್ದೀರಿ.

ಆದರೆ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಒತ್ತುವರಿ ತೆರವು ನಿಟ್ಟಿನಲ್ಲಿ ನಿಮ್ಮ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ? ಒತ್ತುವರಿ ತೆರವು ಎಂಬುದು ಬಡವರ ಮನೆಗಷ್ಟೇ ಸೀಮಿತವೇ? ರಾಜಕಾರಣಿಗಳು, ಹಣ ಹೊಂದಿರುವವರು, ಬಿಲ್ಡರ್‌ ಸಂಸ್ಥೆಗಳ ಕಟ್ಟಡಗಳನ್ನು ಏಕೆ ತೆರವುಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಎಸ್‌ಎನ್‌ಡಿಎಂಸಿ ವತಿಯಿಂದ ರಾಜಕಾಲುವೆಗಳಿಗೆ 124 ಸೆನ್ಸಾರ್‌ಗಳನ್ನು ಅಳವಡಿಸಲಾಗಿದೆ. ಬಿಬಿಎಂಪಿ ರಾಜಕಾಲುವೆಗಳಿಗೆ 24×7 ಕಾರ್ಯನಿರ್ವಹಿಸುವ 455ಕ್ಕೂ ಅಧಿಕ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ.

ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರ ಉಪಾಯಗಳಾಗಿವೆ. ಶಾಶ್ವತ ಪರಿಹಾರದ ಭಾಗವಾಗಿ ಯಾವ ಪ್ರಭಾವಿ ವ್ಯಕ್ತಿಗಳಿಗೂ ಸೊಪ್ಪು ಹಾಕದೆ ರಾಜಕಾಲುವೆ ತೆರವುಗೊಳಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಎಎಪಿ ತೀವ್ರ ಹೋರಾಟವನ್ನು ಸಂಘಟಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ