CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಗುರುವಾರ ಪಿರಿಯಾಪಟ್ಟಣದ ತಮ್ಮ ಕಚೇರಿ ಬಳಿ ವಿಜಯ್ ಕುಮಾರ್ ದೂರುದಾರ ನಟೇಶ್ ಎಂಬುವರಿಂದ ₹30 ಸಾವಿರ ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಖೆಡ್ಡಕ್ಕೆ ಕೆಡವಿದ್ದಾರೆ.

ನಟೇಶ್ ಎಂಬುವರ ಬಿಲ್ ಪಾಸ್ ಮಾಡುವ ಸಲುವಾಗಿ ಅವರಿಂದ ಪಡೆದಿದ್ದ ಚೆಕ್ ಹಿಂತಿರುಗಿಸುವ ವೇಳೆ 30 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ವಿಜಯ್‌. ಈ ಸಂಬಂಧ ನಟೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ಗುರುವಾರ ಪಿರಿಯಾಪಟ್ಟಣದ ತಮ್ಮ ಕಚೇರಿ ಬಳಿ ವಿಜಯ್ ಕುಮಾರ್ ದೂರುದಾರ ನಟೇಶ್ ಅವರಿಂದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಜಿತ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್, ರೂಪಶ್ರೀ, ಲೋಕೇಶ್ ಹಾಗೂ ಸಿಬ್ಬಂದಿ ಮೋಹನ್ ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್, ಲೋಕೇಶ್, ಪೃಥ್ವಿಷ, ಶೇಖರ್ ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ