CrimeNEWSನಮ್ಮಜಿಲ್ಲೆ

KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯು ಮಂಡ್ಯದ ಮದ್ದೂರು ತಾಲೂಕಿನ ಸಾದೊಳಲು ಗ್ರಾಮ ಬಳಿ ನಡೆದಿದೆ.

ಸಾದೊಳಲು ಗ್ರಾಮ ಬಳಿ ಬರುವ ಮದ್ದೂರು-ಮಳವಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವಘಡ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಕೆಎಸ್​ಆರ್​ಟಿಸಿ ಬಸ್ ಮಳವಳ್ಳಿ ಕಡೆಯಿಂದ ಬರುತ್ತಿತ್ತು. ಮದ್ದೂರು ಕಡೆಯಿಂದ ಶಿಫ್ಟ್ ಕಾರು ಹೋಗುವಾಗ ದುರ್ಘಟನೆ ನಡೆದಿದೆ. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ