CrimeNEWSಆರೋಗ್ಯನಮ್ಮಜಿಲ್ಲೆ

ಲಂಚ ಪಡೆದ ವೈದ್ಯನಿಗೆ ನಾಲ್ಕು ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನ ಕೆ.ಆರ್‌. ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ.ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ.

ಉಡುಪಿಯಲ್ಲಿ ಲೋಕಾಯುಕ್ತ ದಾಳಿ – ಬಲೆಗೆ ಬಿದ್ದ ಗ್ರಾಪಂ ಅಧಿಕಾರಿ, ಬಿಲ್ ಕಲೆಕ್ಟರ್: ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯಿತಿ ಬಿಲ್ ಕಲೆಕ್ಟರ್ ಸಂಜಯ್ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸ್‌ ವರಿಷ್ಟಾಧಿಕಾರಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಲಾಗಿದ್ದು, ಈ ವೇಳೆ ನ್ಯಾಯಧೀಶರು ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ