NEWSನಮ್ಮರಾಜ್ಯಶಿಕ್ಷಣ-

ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಆರೋಪಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. ಆದರೆ, ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೇವಲ ಮೂರು ಗಂಟೆಗಳಲ್ಲಿ ವಿಟಿಯು ಅಂತಹ ಸಂಸ್ಥೆಯು ಆಧುನಿಕ ತಾಂತ್ರಿಕತೆಯನ್ನು ಬಳಸಿಕೊಂಡು ಫಲಿತಾಂಶಗಳನ್ನು ಪ್ರಕಟಿಸುತ್ತಿದೆ.

ಆದರೆ, ಸಿಇಟಿ ಪರೀಕ್ಷಾ ಫಲಿತಾಂಶ ಇದುವರೆಗೂ ಪ್ರಕಟಿಸದೆ ಇರುವುದರಿಂದ ದೊಡ್ಡ ಹುನ್ನಾರವಿದೆ. ಈಗಾಗಲೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ ಎಂದು ಹೇಳಿದರು.

ಇದು ಸುಮಾರು ₹3000 ಕೋಟಿ ಹಗರಣವಾಗಿದೆ. 60,000 ಸೀಟುಗಳನ್ನು ಇಂದು ಮಾರಾಟಕ್ಕೆ ಇಡಲಾಗಿದೆ. ಒಂದು ಚೀಟಿಗೆ 3 ಲಕ್ಷದಿಂದ 25 ಲಕ್ಷಗಳವರೆಗೆ ಮಾರಾಟ ಮಾಡುತ್ತಿದ್ದಾರೆ. ಎಷ್ಟೋ ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಸೀಟು ಸಿಗುತ್ತದೋ ಇಲ್ಲವೋ ಎಂದು ನಾಲ್ಕೈದು ಕಾಲೇಜಗಳಿಗೆ ಹೋಗಿ ಅರ್ಜಿ ಹಾಕುತ್ತಿದ್ದಾರೆ, ಒಂದು ಅಪ್ಲಿಕೇಶನ್‌ಗೆ ಸುಮಾರು ₹1200 ವಸೂಲಿ ಮಾಡುತ್ತಿವೆ.

ಒಂದು ಖಾಸಗಿ ಕಾಲೇಜಿನಲ್ಲಿ 35,000 ಅರ್ಜಿಗಳನ್ನು ಮಾರಾಟ ಮಾಡಿದ್ದು, ಒಂದು ಅಪ್ಲಿಕೇಶನ್‌ಗೆ ₹1200 ರೂಪಾಯಿ ಆದರೆ ಸುಮಾರು ₹4.80 ಕೋಟಿ ಅರ್ಜಿಯಿಂದಲೇ ಬಾಚಿಕೊಂಡಿದೆ ಎಂದು ಹೇಳಿದರು.

ಸಿಇಟಿ ಫಲಿತಾಂಶ ಪ್ರಕಟಿಸುವ ಮುನ್ನವೇ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆಗೆ ಸರ್ಕಾರ ಅನುಮತಿ ನೀಡಿರುವುದು ಯಾಕೆ? ಲಕ್ಷ ಲಕ್ಷ ಹಣ ಕಟ್ಟಿ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕಿಂಗ್ ಪಡೆದು, ಸರ್ಕಾರಿ ಹಾಗೂ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ಸಿಕ್ಕಿದರೆ, ಪ್ರತಿಯೊಬ್ಬ ಪೋಷಕರು ಕಟ್ಟಿದ್ದ ಲಕ್ಷಾಂತರ ರೂಪಾಯಿಗಳು ವಾಪಸ್‌ ಬರುವುದಿಲ್ಲ.

ನಾಲ್ಕೈದು ಲಕ್ಷ ಕಟ್ಟಿ, ಎರಡನೇ ಹಾಗೂ ಇನ್ನುಳಿದ ಸುತ್ತಿನಲ್ಲಿ ಉಚಿತ ಸೀಟು ಪಡೆದರೆ ಅವರು ಕಟ್ಟಿರುವ ಹಣದ ಗತಿಯೇನು? ರಾಷ್ಟ್ರ ಮಟ್ಟದಲ್ಲಿ ನಡೆಯುವ ಅನೇಕ ಪರೀಕ್ಷೆಗಳು ಒಂದೆರಡು ವಾರದಲ್ಲಿ ಫಲಿತಾಂಶ ಘೋಷಣೆ ಮಾಡಲಾಗುತ್ತದೆ. ಆದರೆ ಸಿಇಟಿ ಪರೀಕ್ಷೆ ನಡೆದು ಒಂದೂವರೆ ತಿಂಗಳಾದರೂ ಇನ್ನೂ ಫಲಿತಾಂಶ ಘೋಷಣೆಯಾಗದಿರುವುದು ಸಾಕಷ್ಟು ಅನುಮಾನ ಮೂಡಿಸಿದೆ ಎಂದು ಹೇಳಿದರು.

ಸಿಲಿಕಾನ್ ಸಿಟಿ ಎಂದು ಹೆಸರು ಮಾಡಿರುವ ಬೆಂಗಳೂರಿನಲ್ಲಿ ಪರೀಕ್ಷಾ ಫಲಿತಾಂಶ ಇಷ್ಟೊಂದು ವಿಧಾನವಾಗುತ್ತಿರುವುದರಿಂದ ದೊಡ್ಡ ಮಟ್ಟದ ಕುತಂತ್ರವಿರುವುದು ಸಾಬೀತಾಗುತ್ತಿದೆ. ಓ ಎಂ ಆರ್ ಶೀಟ್ಗಳಲ್ಲಿ ಗೋಲ್ಮಾಲ್ ಆಗುವ ಸಾಧ್ಯತೆಯೂ ಸಹ ಸಾಕಷ್ಟು ಇರುತ್ತದೆ ” ಎಂಬ ಸಂಖ್ಯೆಯನ್ನು ನಾಗಣ್ಣ ವ್ಯಕ್ತಪಡಿಸಿದರು.

ಖಾಸಗಿ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಿಇಟಿ ಫಲಿತಾಂಶದ ಬಳಿಕ ಸರ್ಕಾರಿ ಸೀಟು ಸಿಕ್ಕಾಗ, ಅವರು ಕಟ್ಟಿರುವ ಪೂರ್ತಿ ಶುಲ್ಕವನ್ನು ಖಾಸಗಿ ಕಾಲೇಜುಗಳು ವಾಪಸ್ ಕೊಡುವಂತೆ ಸರ್ಕಾರ ಆದೇಶ ಕೊಡಬೇಕು, ಇಲ್ಲವಾದಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ಭಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಮೂರು ಪಕ್ಷಗಳ ರಾಜಕಾರಣಿಗಳ ಖಾಸಗಿ ಕಾಲೇಜುಗಳು ಇರುವ ಕಾರಣ, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಎಲ್ಲ ರಾಜಕಾರಣಿಗಳೂ ಒಗ್ಗಟ್ಟಾಗಿ ಶಿಕ್ಷಣವನ್ನು ದಂಧೆ ಮಾಡಿಕೊಂಡಿದ್ದಾರೆ. ಬೇಜವಾಬ್ದಾರಿ ಉನ್ನತ ಶಿಕ್ಷಣ ಸಚಿವರಿಗೆ ಜನ ಸಾಮಾನ್ಯರ ಕಷ್ಟ ಅರ್ಥ ಆಗುತ್ತಿಲ್ಲವಾ ? ಮುಖ್ಯಮಂತ್ರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಖಾಸಗಿ ಕಾಲೇಜುಗಳಿಗೆ ಸೂಚನೆ ಕೊಡಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ