ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕೆಲ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು ಇಂದಿನಿಂದ ಅಂದರೆ ಮಂಗಳವಾರದಿಂದ ಮೇ 16ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಕೋಲಾರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ವರದಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Related

Megha