ಬೆಂಗಳೂರು: ದೇಶ್ಯಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.
ಈ ಆದೇಶವು ಇಂದಿನಿಂದಲೇ ಅಂದರೆ ಸೋಮವಾರದಿಂದಲೇ ಜಾರಿಗೆ ಬಂದಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿ ವರ್ಷ ಹೆಚ್ಚಾಗುತ್ತದೆ. ಇದರಂತೆ ಏಪ್ರಿಲ್ 1ರಿಂದ ಪರಿಷ್ಕೃತ ಶುಲ್ಕ ಜಾರಿಯಾಗಬೇಕಿತ್ತು, ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಶುಲ್ಕ ಜಾರಿಗೆ ತಡವಾಗಿತ್ತು.
ದೇಶ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು ಶೇ.3 ರಿಂದ ಶೇ.5 ರಷ್ಟು ಹೆಚ್ಚಿಸಲಾಗುತ್ತಿದ್ದು, ವಾಹನ ಸವಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ.
ದೇಶದಲ್ಲಿ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ ಶೇ.5 ರಷ್ಟು ಹೆಚ್ಚಳ ಮಾಡಲಾಗುವುದೆಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಯಾಣಿಕರ ಮೇಲೂ ಭಾರೀ ಹೊರೆ : ಟೋಲ್ ಶುಲ್ಕಗಳು ಮತ್ತು ಇಂಧನ ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಳವು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗ ಮತ್ತು ಅಭಿವೃದ್ಧಿಗೆ ಸಹಾಯ ಮಾಡಲಿದೆ. ಆದರೆ ಸರ್ಕಾರದ ಈ ಕ್ರಮಕ್ಕೆ ವಿರೋಧ ಪಕ್ಷಗಳು ಹಾಗೂ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಆರ್ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಮತ್ತು ಅಶೋಕ್ ಬಿಲ್ಡ್ಕಾನ್ ಲಿಮಿಟೆಡ್ನಂತರ ಉನ್ನತ ನಿರ್ವಾಹರಿಗೆ ಟ್ರೋಲ್ ತೆರಿಗೆ ಹೆಚ್ಚಳದಿಂದ ಪ್ರಯೋಜನ ಸಿಗಲಿದೆ. ಈ ಹಿಂದೆ ಹಣಕಾಸು ವರ್ಷದ ಆರಂಭದಲ್ಲೇ ರಾಜ್ಯದ ವಾಹನ ಸವಾರರಿಗೆ ಮತ್ತೆ ಟೋಲ್ ಬರೆ ಬಿದ್ದಿತ್ತು.