NEWSದೇಶ-ವಿದೇಶನಮ್ಮರಾಜ್ಯ

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 30,779ಮತಗಳಿಂದ ಮುನ್ನಡೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಅವರಿಗೆ ಹಿನ್ನಡೆಯಾಗುತ್ತಿದೆ.

ಇನ್ನು ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ನಿಧಾನವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಎಣಿಕೆ ಮುಕ್ತಾಯವಾದ ಬಳಿಕ ಎರಡು ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್‌ ಮುನ್ನಡೆಯಲ್ಲಿದ್ದರು.

ಮೊದಲನೇ ಸುತ್ತಿನಲ್ಲಿ 5263 ಮತ್ತು ಎರಡನೇ ಸುತ್ತಿನಲ್ಲಿ 2557 ಮುನ್ನಡೆಯಲ್ಲಿದ್ದರು. ಮೂರನೇ ಸುತ್ತಿನ ಎಣಿಕೆಯಲ್ಲಿ ಒಟ್ಟು 1,19,389 ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ತಮ್ಮದಾಗಿಸಿಕೊಂಡರು. ಬಿಜೆಪಿ ಅಭ್ಯರ್ಥಿ ಬಾಲರಾಜು 95,856 ಮತಗಳನ್ನು ಪಡೆದರು.

30,779ಮತಗಳಿಂದ ಸುನೀಲ್ ಬೋಸ್ ಮುನ್ನಡೆ: 4 ನೇ ಸುತ್ತಿನಲ್ಲಿ 24 ಸಾವಿರ ಲೀಡ್ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಆರಂಭದಿಂದಲೂ ಸತತವಾಗಿ ಮುನ್ನಡೆ ಮತ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈವರೆಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ 1,50,701 ಮತ್ತು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ 1,19,922 ಮತಗಳು ಬಂದಿವೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ