ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಇಂದು (ಜೂ.6) ಮುಂಜಾನೆ ನಿಧನರಾಗಿದ್ದಾರೆ.
ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹಲವು ದಿನಗಳಿಂದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಇಹಲೋಕ ತ್ಯೆಜಿಸಿದ್ದಾರೆ.
2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ವಿರುದ್ಧ ಸೋಲುಂಡಿದ್ದರು.
ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಲಿದೆ. ಇತ್ತೀಚಿಗಷ್ಟೇ ಯಡಿಯೂರಪ್ಪ ಹಾಗೂ ವಿ.ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.