NEWSನಮ್ಮಜಿಲ್ಲೆನಮ್ಮರಾಜ್ಯ

ಜೂನ್ 8ರಂದು ಆಮ್ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ.

ನಗರದ ಅಲುಮ್ನಿ ಅಸೋಸಿಯೇಷನ್‌ ಯುವಿಸಿಇಯಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು, ಎಲ್ಲ ಘಟಕದ ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ