NEWSನಮ್ಮಜಿಲ್ಲೆನಮ್ಮರಾಜ್ಯ

ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣಕ್ಕೆ ತಲೆದಂಡ- ಸಚಿವ ನಾಗೇಂದ್ರ ರಾಜೀನಾಮೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಇಂದು ಪತನವಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಈ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳಿಗೆ ಅಡ್ರಸ್‌ ಮಾಡಿ ರಾಜೀನಾಮೆ ಕೊಟ್ಟಿದ್ದಾರೆ.

ಈ ಮೊದಲೇ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿತ್ತು. ಈ ಸಂಬಂಧ ಹೈಕಮಾಂಡ್ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿತ್ತು.

ಅಲ್ಲದೆ ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈ ಪ್ರಕರಣ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿತ್ತು.

ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಈಗಲೇ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದರು.

ಇನ್ನೊಂದೆಡೆ ಬಿಜೆಪಿ ಜೂನ್‌ 6ರ ಒಳಗಡೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಇಂದಿಗೆ ಡೆಡ್‌ಲೈನ್‌ ಅಂತ್ಯವಾಗಿದ್ದು ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವ ಸಾಧ್ಯತೆ ಇತ್ತು. ಈ ಎಲ್ಲದರ ಹಿನ್ನೆಲೆಯಲ್ಲಿ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಆಗುವ ಮುಜುಗರವನ್ನು ತಪ್ಪಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ