NEWS

ದೇಶದಲ್ಲಿ ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ

ಊಹಾಪೋಹಗಳಿಗೆ ಕಿವಿಗೊಡದಿರಿ l ಕೇಂದ್ರ ಸಚಿವ ಸದಾನಂದಗೌಡ ಸಲಹೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ ಎಂದು ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಡಿ. ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಲಾಕ್‌ ಡೌನ್‌ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು  ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿದೆ . ರಸಗೊಬ್ಬರ ಕಾರ್ಖಾನೆಗಳು, ಗೋಡಾನುಗಳು, ಬಂದರುಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಹಾಗಿಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ. ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್‌ಡೌನ್ ನಿಯಮಗಳನ್ನು (ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಇವೇ ಮುಂತಾದವು) ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದರು.

ದೇಶದಲ್ಲಿ  ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ನಾನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ಧಾರಿ ನಮ್ಮದು. ರೈತಬಾಂಧವರಿಗೆ ನನ್ನ ಮನವಿ. ನೀವು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ. ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ