CrimeNEWSಸಿನಿಪಥ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೂ ಹತ್ಯೆಯಾದ ರೇಣುಕಾಸ್ವಾಮಿಗೂ ಏನು ಸಂಬಂಧ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ‌ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (33) ಎಂಬಾತನ ಕೊಲೆ ಆರೋಪದಡಿ ಬಂಧನಕ್ಕೊಳಗಾಗಿದ್ದು, ಆತನ ಕೊಲೆ ಮಾಡಲು ನಾನು ಹೇಳಿಲ್ಲ, ಬೆದರಿಸಲು ಹೇಳಿದ್ದೆ ಎಂದು ದರ್ಶನ್‌ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

ಹಿನ್ನೆಲೆ: ನಟಿ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಮೆಸೇಜ್‌ ಮಾಡಿದ್ದ. ಹೀಗಾಗಿ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದರಿಂದ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಮನೆಯಲ್ಲೇ ದರ್ಶನ್‌ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ದರ್ಶನ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿದೆ. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು.

ದರ್ಶನ್‌ ಕೈವಾಡವೇನು?: ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಅಲ್ಲೇ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?: ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು.

ಇತ್ತ ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಯಿತು ಎನ್ನಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಯಾರು?: ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 33 ವರ್ಷದ ಯುವಕ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ದರ್ಶನ್‌ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಕರೆತರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ನಡುವೆ ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿತ್ತು ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ