ಅರ್ಜಿ ಸಲ್ಲಿಸಲು 2025ರ ಮೇ 23 ಕೊನೆಯ ದಿನ
ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ರಾರಂಭಿಸಲು ಸರ್ಕಾರದಿಂದ ಆದೇಶ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಜ್ಯಾದ್ಯಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://sevasindhu.karnataka.gov.in/Sevasindhu/DepartmentServices ಅಥವಾ https://dom.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದೆ.
90 ದಿನದ ವಸತಿಯುತ ತರಬೇತಿಯಾಗಿದ್ದು, ತರಬೇತಿಯು ಮೈಸೂರು ಮತ್ತು ಬೆಳಗಾವಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಅಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆ: 1)ಅಭ್ಯರ್ಥಿಯು ಕರ್ನಾಟಕದ ಕಾಯಂ ನಿವಾಸಿಯಾಗಿದ್ದು ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ ಕ್ರಿಶ್ಚಿಯನ್ ಸಿಖ್ ಜೈನ್ ಬೌದ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. 2) ಅಭ್ಯರ್ಥಿಯ ವಯಸ್ಸು 21 ರಿಂದ 30 ರ ವಳಗಿರಬೇಕು.
3) ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. 4. ಸದರಿ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು 5) ಎತ್ತರ: ಪುರುಷರಿಗೆ ಕನಿಷ್ಠ 168 ಸೆಂ.ಮೀ ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ 6) ತೂಕ: ಪುರುಷರಿಗೆ ಕನಿಷ್ಠ 50 ಕೆಜಿ ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆಜಿ. 7)ಎದೆ ಸುತ್ತಳತೆ (ಪುರುಷರಿಗೆ): ಕನಿಷ್ಠ 76 ಸೆಂ.ಮೀ
ಗಮನದಲ್ಲಿ ಇರಬೇಕಾದ ಅಂಶಗಳು: 1) ಇಲಾಖಾ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿರುತ್ತದೆ. 2) ಇಲಾಖಾ ವತಿಯಿಂದ ಯಾವುದೇ ಪ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ, ಇಲಾಖೆ ವೆಬ್ಸೈಟ್ ಅನ್ನು ವೀಕ್ಷಿಸತಕ್ಕದ್ದು.
3) ತಪ್ಪು ಮಾಹಿತಿ ಕಾರಣದಿಂದ ಉಂಟಾಗಬಹುದಾದ ಲೋಕಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಕಾರಣ. 4) ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 827779990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...