ಕೆ.ಆರ್.ಪೇಟೆ: ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ನಗುಮೊಗದೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಿ, ಆ ಜನರ ನಿಸ್ವಾರ್ಥ ಸೇವೆಯಲ್ಲಿ ಭಗವಂತನನ್ನು ಕಾಣಿರಿ ಎಂದು ವೈದ್ಯರಿಗೆ ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ.ಮೋಹನ್ ಸಲಹೆ ನೀಡಿದರು.
ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ.ಮೋಹನ್ ದಿಢೀರ್ ಭೇಟಿ ನೀಡಿ, ರೋಗಿಗಳ ಆರೋಗ್ಯ ಕುಶಲೋಪರಿ ವಿಚಾಡಿಸಿ ವಾರ್ಡಗಳ ಪರಿಶೀಲಿಸಿದ ಬಳಿಕ ಆಸ್ಪತ್ರೆಯ ವೈದ್ಯರ ಕಾರ್ಯದಕ್ಷತೆ ಹಾಗೂ ಸೇವಾ ಮನೋಭಾವನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡಜನರೇ ಆಗಿರುವುರಿಂದ ವೈದ್ಯರು ರೋಗಿಗಳನ್ನು ನಗುಮೊಗದಿಂದ ಆತ್ಮೀಯತೆಯೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕಲ್ಲದೆ, ಸರ್ಕಾರವೇ ಉಚಿತವಾಗಿ ನೀಡುವ ಔಷಧಗಳು ಹಾಗೂ ಮಾತ್ರೆಗಳನ್ನು ನೀಡಿ ಶೀಘ್ರವೇ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ. ಶಶಿಕುಮಾರ್, ತಾಲೂಕು ಆರೋಗ್ಯಧಿಕಾರಿ ಡಾ.ಅಜಿತ್ ಸೇರಿದಂತೆ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ