CrimeNEWSನಮ್ಮರಾಜ್ಯ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎರಡು ಬಾರಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ವಿದ್ಯುತ್‌ ಸ್ವರ್ಶದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಸಾಕಾನೆ ಅಶ್ವತ್ಥಾಮನನ್ನು ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂ.​ 11)  ಬೆಳಗ್ಗೆ 5.30ಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಆನೆ ಮೃತಪಟ್ಟಿರುವುದು ಗೊತ್ತಾಗಿದೆ.

ಈ ವೇಳೆ ಕೂಲಂಕಷವಾಗಿ ಪರಿಶೀಲಿಸಿದಾಗ ಆನೆಯ ಬೆನ್ನಿನ ಮೇಲೆ ಸೋಲಾರ್‌ ತಂತಿಬೇಲಿ ಬಿದ್ದು, ಶಾಕ್​ ತಗುಲಿರುವುದರಿಂದ ಅಸುನೀಗಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. 4 ವರ್ಷಗಳು ಪಳಗಿಸಿದ ಬಳಿಕ 2021 ಹಾಗೂ 2022ರಲ್ಲಿ ಮೈಸೂರು ದಸರಾದ ಗಜ ಪಯಣದಲ್ಲಿ ಹೆಜ್ಜೆ ಹಾಕಿತ್ತು. ಶಾಂತ ಸ್ವಭಾವ ಹಾಗೂ ಗಾಂಭೀರ್ಯಕ್ಕೆ ಅಶ್ವತ್ಥಾಮ ಹೆಸರುವಾಸಿಯಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಆನೆಯ ಮಾದರಿ ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಅಶ್ವತ್ಥಾಮ ಸಾವಿಗೆ ಸಿಎಂ ಸಂತಾಪ: ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಇನ್ನು ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ. ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ ಎಂದು ಸ್ಮರಿಸಿದ್ದಾರೆ.

ತನಿಖೆ ನಡೆಸಿ, ವರದಿ ನೀಡಲು ಸಚಿವ ಖಂಡ್ರೆ ಸೂಚನೆ: ಅಶ್ವತ್ಥಾಮ ಆನೆಯ ನಿಧನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದು, ಸೌರ ವಿದ್ಯುತ್ ಬೇಲಿ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಈ ಆಕಸ್ಮಿಕ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳೀಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...