NEWSನಮ್ಮಜಿಲ್ಲೆನಮ್ಮರಾಜ್ಯ

ಭಾರತೀಪುರ ಕ್ರಾಸ್ ಗ್ರಾಪಂಗೆ ಬಿಗ ಜಡಿದು ಪಿಡಿಒ ವರ್ತನೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ಗ್ರಾಮ ಪಂಚಾಯಿತಿ ಪಿಡಿಒ ಬೇಜವಾಬ್ದಾರಿ ಹಾಗೂ ಕರ್ತವ್ಯ ನಿರ್ಲಕ್ಷ್ಯದಿಂದ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿ ಭಾರತೀಪುರ ಕ್ರಾಸ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಯಿಂದ ವಂಚಿತವಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು ಮತ್ತು ಗ್ರಾಪಂ ಸದಸ್ಯರು ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡ ಕುಂದೂರು ರಾಮೇಗೌಡ, ಗ್ರಾಮ ಪಂಚಾಯಿತಿ ಎಂದರೆ ಗ್ರಾಮೀಣ ಜನರಿಗೆ ಶಕ್ತಿಸೌಧ. ಆದರೆ ನಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ್‌ ಬೇಜವಾಬ್ದಾರಿಯ ಕಾರ್ಯವೈಖರಿಯಿಂದ ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿಡಿಒ ಉದ್ಧಟತನದಿಂದ ಗ್ರಾಪಂ ವ್ಯಾಪ್ತಿಯ ನಿವಾಸಿಗಳು ಕೊಟ್ಟಿಗೆ ನಿರ್ಮಿಸಿಕೊಂಡಿದ್ದು, ಹಲವಾರು ತಿಂಗಳಿಗಳು ಕಳೆದರೂ ಕೊಟ್ಟಿಗೆ ನಿರ್ಮಾಣದ ಹಣವನ್ನು ಈವರೆಗೂ ಪಾವತಿಸಿಲ್ಲ. ವರ್ಷಗಳು ಕಳೆದರೂ ಸಾರ್ವಜನಿಕರ ನಿವೇಶನಗಳ ಈ ಸ್ವತ್ತು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಬೀದಿ ದೀಪಗಳ ಸಮಸ್ಯೆ ತಲೆದೋರಿದೆ.

ಇನ್ನು ನಿರ್ವಹಣೆ ಇಲ್ಲದೆ ಗಬ್ಬೆದ್ದು ಮಾರುತ್ತಿರುವ ಚರಂಡಿಗಳು, ಸೂಕ್ತ ರಸ್ತೆ ಇಲ್ಲದೆ ಕಂಗೆಟ್ಟಿದ್ದಾರೆ ನಿವಾಸಿಗಳು. ಹೀಗೆ ಸಮಸ್ಯೆಯ ಸರಮಾಲೆಯಲ್ಲಿ ಸಿಲುಕಿರುವ ಗ್ರಾಮಗಳಿಗೆ ಇಂದಿಗೂ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸುವ ಕೆಲಸ ಮಾಡದೆ ಉದ್ದಟತನ ಮರೆಯುತ್ತಿದ್ದಾರೆ ಪಿಡಿಒ. ಹಾಗಾಗಿ ಇಂದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ ಇಂತಹ ಬೇಜವಾಬ್ದಾರಿ ಅಧಿಕಾರಿಯ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಶಿಸ್ತು ಕ್ರಮ ಜರುಗಿಸಿ ನಮಗೆ ನ್ಯಾಯ ಕೊಡಿಸಿಕೊಡಬೇಕು ಎಂದು ಆಗ್ರಹಿಸಿದರು.

ಗ್ರಾ.ಪಂ ಸದಸ್ಯ ಬೆಡದಹಳ್ಳಿ ಸುನೀಲ್ ಮಾತನಾಡಿ, ನಮ್ಮ ಪಿಡಿಒ ಅವರ ಉದ್ದಟತನದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿವೆ. ಇವರ ಬೇಜವಾಬ್ದಾರಿತನದಿಂದ ಸಾರ್ವಜನಿಕರು ಜನಪ್ರತಿನಿಧಿಗಳಾದ ನಮಗೆ ದಿನನಿತ್ಯವೂ ಹಿಡಿಶಾಪ ಹಾಕುತ್ತಿದ್ದಾರೆ. ಪಿಡಿಒ ಅವರ ಶಿಸ್ತು ಕಾರ್ಯವೈಖರಿ ಇಲ್ಲದೆ ಗ್ರಾ.ಪಂ ಕೆಲ ಸಿಬ್ಬಂದಿಗಳು ಸೂಕ್ತ ದಾಖಲೆಗಳು ಇರುವ ಸಾರ್ವಜನಿಕರ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಈ ಬಗ್ಗೆ ಚರ್ಚಿಸಿದರೆ ಕುಂಟುನೆಪ ಹೇಳುತ್ತಾ ಸಾರ್ವಜನಿಕರನ್ನು ಅಲೆದಾಡಿಸುತ್ತಿದ್ದಾರೆ. ಆದರೆ ಬಲಾಡ್ಯರಿಗೆ ಅವರ ಅನುಗುಣವಾಗಿ ಕಾರ್ಯನಿರ್ವಹಿಸುತ್ತಾರೆ ಇದು ಬೇಸರದ ಸಂಗತಿ. ಹಲವು ಕಾಮಗಾರಿಗಳಲ್ಲಿ ಲೋಪ ದೋಷಗಳು ಸೇರಿದಂತೆ ಕಳಪೆ ಕೆಲಸ ನಡೆಸಿದ್ದು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಳಪೆ ಕಾಮಗಾರಿಗಳ ಬಗ್ಗೆ ಮೇಲಧಿಕಾರಿಗಳು ಸೂಕ್ತ ಕ್ರಮ ವಹಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಬೇರ, ಮಾಜಿ ಅಧ್ಯಕ್ಷೆ ಶಶಿಕಲಾ ಶಿವಕುಮಾರ್, ಸದಸ್ಯರು ಶಿವರಾಮು, ಕುಂದೂರು ರಾಮೇಗೌಡ, ಬೆಡದಹಳ್ಳಿ ಮಂಜುನಾಥ್, ಭಾರತೀಪುರ ಬಲರಾಮು, ಕೊರಟಿಗೆರೆ ಮಂಜೇಗೌಡ, ದೇವರಾಜು, ಭಾರತೀಪುರ ಕೊಪ್ಪಲು ಕುಮಾರ್, ಕುಂದೂರು ಲೋಕೇಶ್ ಸೇರಿದಂತೆ ಇತರರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?