NEWSದೇಶ-ವಿದೇಶನಮ್ಮರಾಜ್ಯ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು.
ಈ ಬಾಕಿ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ ಎಂದರು.

ಇನ್ನು ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ₹46,859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ ₹24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ ₹22,758 ಕೋಟಿಗಳಿದ್ದು ಕೇಂದ್ರದಿಂದ ₹18,561ಕೋಟಿ ಮಾತ್ರ ಬಿಡುಗಡೆ ಆಗಿದೆ. ₹4,195 ಕೋಟಿ ರೂಪಾಯಿ ಬಿಡುಗಡೆ ಆಗಿಲ್ಲ ಎಂದು ವಿವರಿಸಿದರು.

ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ ಎಂದರು.

ಅಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಈ ಸಂಬಂಧ ಕೇಂದ್ರದ ಪಾಲು ನೀಡಲು ಪತ್ರ ಬರೆದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ