NEWSನಮ್ಮಜಿಲ್ಲೆನಮ್ಮರಾಜ್ಯ

ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ. ಪೋಷಕರು ಮಕ್ಕಳ ಹಕ್ಕುಗಳನ್ನು ಮೊಟಕುಗೊಳಿಸದೇ ಕಡ್ಡಾಯವಾಗಿ ಶಾಲೆಗೆ ಕಳಿಸಿ ಶಿಕ್ಷಣ ಕೊಡಿಸಿ ಭವಿಷ್ಯದ ನಾಗರಿಕರನ್ನಾಗಿ ತಯಾರು ಮಾಡಿ ಎಂದು ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ ಕರೆ ನೀಡಿದರು.

ಕೆ.ಆರ್.ಪೇಟೆ ಪಟ್ಟಣದ ಕಾಟೇಜ್ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಶಾಲೆಗೆ ಹೋಗಿ ಆಟ ವಾಡಿಕೊಂಡು ಪಾಠ ಕಲಿಯುವ ಚಿಕ್ಕ ಮಕ್ಕಳ ಉಜ್ವಲವಾದ ಭವಿಷ್ಯಕ್ಕೆ ಕಂಟಕರಾಗಿ ಸಾಮಾಜಿಕ ಅನಿಷ್ಠ ಪದ್ಧತಿಯಾದ ಬಾಲ ಕಾರ್ಮಿಕ ಪದ್ದತಿಯನ್ನು ಬೆಂಬಲಿಸದೆ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿ ಸಾಮಾಜಿಕ ಅನಿಷ್ಟವಾಗಿರುವ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪಣ ತೊಡಬೇಕು ಎಂದರು.

ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕೃಪಾ ಮಾತನಾಡಿ, 15ವರ್ಷದ ಒಳಗಿನ ಮಕ್ಕಳ ಹಕ್ಕುಗಳನ್ನು ನಾಗರೀಕ ಸಮಾಜದ ಪ್ರತಿಯೊಬ್ಬರೂ ಗೌರವಿಸಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳದೆ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು. ಬಾಲ ಕಾರ್ಮಿಕ ಪದ್ದತಿಯನ್ನು ಬೆಂಬಲಿಸಿ ಮಕ್ಕಳನ್ನು ದುಡಿಸಿಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಜತೆಗೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಸಿದರು.

ಅಪರ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ, ತಹಸೀಲ್ದಾರ್ ನಿಸರ್ಗಪ್ರಿಯಾ, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ರಾಜೇಗೌಡ, ಸಹಾಯಕ ಸರ್ಕಾರಿ ಅಭಿಯೋಜಕ ಶಿವಪ್ಪ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಮಂಜುನಾಥ್, ಪಟ್ಟಣದ ಬಾಲ ಯೇಸು ಚರ್ಚಿನ ರೆವರೆಂಡ್ ಫಾದರ್ ಪೌಲ್ವಿಸ್ ಥಾಮಸ್, ಕಾಟೆಜ್ ಶಾಲೆಯ ಮುಖ್ಯ ಶಿಕ್ಷಕಿ ಏಮಿಲ್ಡ ಕ್ವಾಡ್ರಸ್ ಪಿಂಟೋ, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್, ತಾಲೂಕು ಕಾರ್ಮಿಕ ನಿರೀಕ್ಷಕ ಗಂಗಾಧರ್ ಸೇರಿದಂತೆ ವಕೀಲರ ಸಂಘದ ಉಪಾಧ್ಯಕ್ಷ ದಿನೇಶ್, ನಿರಂಜನ, ಎಚ್.ರವಿ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ