NEWSನಮ್ಮಜಿಲ್ಲೆಶಿಕ್ಷಣ-

ಕಸ ವಿಂಗಡಣೆ ಘಟಕದ ಮೇಲೆ ದಾಳಿ: ಶಾಲೆಯಿಂದ ಹೊರಗುಳಿದ 9 ಮಕ್ಕಳ ರಕ್ಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕಸ ವಿಂಗಡಣೆ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಶಾಲೆಯಿಂದ ಹೊರಗುಳಿದು ಕೆಲಸ ಮಾಡುತ್ತಿದ್ದ 9 ಮಕ್ಕಳನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಹಸ್ತಾಂತರಿಸಿದ್ದಾರೆ.

ಬುಧವಾರ ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಮೇರೆಗೆ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದ ಮೇಲೆ ದಾಳಿ ನಡೆಸಿ ಮಕ್ಕಳ ರಕ್ಷಣೆ ಮಾಡಿದ್ದಾರೆ.

ಇನ್ನು ಈ ದಾಳಿ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಪತ್ತೆಯಾಗಲಿಲ್ಲ. ಆದರೆ, 9 ಮಕ್ಕಳು ಶಾಲೆಯಿಂದ ಹೊರಗುಳಿದು ಪಾಲಕರ ಜೊತೆಯಲ್ಲಿ ವಾಸವಾಗಿದ್ದರು. ಮೂಲತಃ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದ ನಿವಾಸಿಗಳಿವರು.

ಇನ್ನು ದಾಳಿ ವೇಳೆ ಸಿಕ್ಕಂತಹ ಮಕ್ಕಳನ್ನು ದೇವನಹಳ್ಳಿ ತಾಲೂಕಿನ ವಿಜಯಪುರದ ಸರ್ವೋದಯ ಸರ್ವಿಸ್ ಸೊಸೈಟಿಯಲ್ಲಿ ಪುನರ್ ವಸತಿ ಕಲ್ಪಿಸಲಾಗಿದ್ದು, ಸದ್ಯ ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಮಕ್ಕಳನ್ನು ಹಸ್ತಾಂತರಿಸಲಾಗಿದೆ. ಮುಂದಿನ ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಈ ವೇಳೆ ಕಸ ವಿಂಗಡಣೆ ಘಟಕದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ, ಮಕ್ಕಳು ಹಾಗೂ ಪೋಷಕರನ್ನು ಕಸ ವಿಂಗಡಣೆ ಘಟಕದಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುವುದಕ್ಕೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶೆಡ್‌ಗಳನ್ನು ನಿರ್ಮಿಸಿಕೊಡಬೇಕೆಂದು ಕಸ ವಿಂಗಡಣೆ ಘಟಕದ ಗುತ್ತಿಗೆದಾರರಿಗೆ ಅಧಿಕಾರಿಗಳು ತಾಕೀತು ಮಾಡಿದ್ದಾರೆ.

ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್. ನಾಗೇಂದ್ರ, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎಸ್‌.ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕ ಅಂಬಿಕಾ, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸಂಜು, ಬಿಇಒ ಕಚೇರಿಯ ನಾಗಪ್ಪ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ