NEWSಬೆಂಗಳೂರುಸಂಸ್ಕೃತಿ

ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನಮಾಡಿ ಮಾತನಾಡಿದರು.

ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ. ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜತೆ ಹೋಗಿ ಸೇರೋದು ಸರಿಯಲ್ಲ ಎಂದರು.

ಇವತ್ತಿನ‌ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜತೆ ರಾಜಿ ಮಾಡಿಕೊಂಡರೆ ಏನಾಗುತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ. ಈ ಅರಿವು ಎಲ್ಲರಿಗೂ ಇರಬೇಕು ಎಂದು ಹೇಳಿದರು.

ಇನ್ನು ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ಧ, ಬಸವ ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ‌ ವಾಸ್ತವ. ಸಾಮಾಜಿಕ‌ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದರು.

ಡಾ.ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ. ಇನ್ನು ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿಗೆ ಭಾಜನರಾಗಿರುವ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಡಾ.ಷರೀಫಾ, ಡಾ.ನಳಿನಾಕ್ಷಿ ಸಣ್ಣಪ್ಪ, ನಾಗವೇಣಿ, ಸಂಗಮ್ ದೇವ್, ಶಿವಲಿಂಗಪ್ಪ ಈ ಐವರು ಗಣ್ಯರು ಪ್ರಶಸ್ತಿಗೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ ಎಂದರು.

ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ ಬಿ.ಕೆ.ರವಿ ಅವರ ಪತ್ರಿಕಾ ವೃತ್ತಿಯು 50 ವಸಂತ ಪೂರೈಸಿದ ಈ ಹೊತ್ತಿನಲ್ಲಿ ಅವರನ್ನು ಅತ್ಯಂತ ಸಂತೋಷದಿಂದ ಸನ್ಮಾನಿಸಿದ್ದೇನೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು