NEWSನಮ್ಮಜಿಲ್ಲೆ

ಮತ್ತೆ ಮೈಸೂರಿನ ಐವರಿಗೆ ಕೊರೊನಾ ಪಾಸಿಟಿವ್‌

ಇಂದು ಮಂಧ್ಯಾಹ್ನದ ವೇಳೆಗೆ 10ಕ್ಕೇರಿದ ಸೋಂಕಿತ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಏರುತ್ತಲೆ ಇದೆ. ಅದರಲ್ಲೂ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಭಯದವಾತಾವರಣ ನಿರ್ಮಾಣಗೊಂಡಿದೆ.

ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಈ ಜಿಲ್ಲೆಯ ಒಂದರಲ್ಲೇ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಮೈಸೂರಿಗರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಮೈಸೂರಿನ ಐದು ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ ಇಂದು 0 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 207ಕ್ಕೇರಿಕೆಯಾಗಿದೆ.

ಮೈಸೂರಿನಲ್ಲಿ ಸೋಂಕಿತನ ಪ್ರಕರಣಗಳ ಸಂಖ್ಯೆ 42ಕ್ಕೇರಿಕೆಯಾಗಿದೆ. ಇದರಲ್ಲಿ 31 ಜನರು ಜ್ಯುಬಿಲಿಯೆಂಟ್ ಕಂಪನಿಯ ನೌಕರರಾಗಿದ್ದಾರೆ. ಇನ್ನು 8 ಮಂದಿ ನ್ಯೂಡೆಲ್ಲಿಯ ನಿಜಾಮುದ್ದೀನ್ ಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ ಇಂದು ಮತ್ತೆ ಹತ್ತು ಮಂದಿಯಲ್ಲಿ ಸೋಂಕು ದೃಢ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 48 ಹಾಗೂ 57 ವರ್ಷದ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ, ಕಲಬುರಗಿಯ 55 ವರ್ಷದ ವ್ಯಕ್ತಿ, ಬೆಂಗಳೂರಿನ ಗ್ರಾಮಾಂತರದಲ್ಲಿ 35 ವರ್ಷದ ವ್ಯಕ್ತಿ ಹಾಗೂ 11 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿರಿ ಕರ್ನಾಟಕದಲ್ಲಿ ಇಂದು  ಮತ್ತೆ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್‌

ಇನ್ನು ಬೆಂಗಳೂರಿನಲ್ಲಿ ಕೆಲ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲು ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ