NEWSನಮ್ಮಜಿಲ್ಲೆ

NWKRTC: ಏಳು ಮಂದಿ ATSಗಳಿಗೆ DMಗಳಾಗಿ ಬಡ್ತಿ ನೀಡಿ ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 7 ಮಂದಿಯನ್ನು ಸಹಾಯಕ ಸಂಚಾರ ವ್ಯವಸ್ಥಾಪಕ (ದರ್ಜೆ-2)ರ ಹುದ್ದೆಗೆ ಬಡ್ತಿ ನೀಡಿ ಸಂಸ್ಥೆಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇದೇ ಜೂನ್‌ 24ರಂದು ನಡೆದ ಇಲಾಖಾ ಮುಂಬಡ್ತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಅದರಂತೆ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಜೂನ್‌ 25ರಂದು ಸಹಾಯಕ ಸಂಚಾರ ಅಧೀಕ್ಷಕ (ದರ್ಜೆ-3)ರಾಗಿದ್ದ 7ಮಂದಿಯನ್ನು ಸಹಾಯಕ ಸಂಚಾರ ವ್ಯವಸ್ಥಾಪಕ (ದರ್ಜೆ-2) ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬಡ್ತಿಯೊಂದಿಗೆ ಡಿಎಂಗಳಾಗಿ ವರ್ಗಾವಣೆಗೊಂಡವರ ವಿವರ: ಉತ್ತರ ಕನ್ನಡ ವಿಭಾಗ ಶಿರಸಿಯ ವಿ.ತ.ದಳದಲ್ಲಿದ್ದ ಸಹಾಯಕ ಸಂಚಾರ ಅಧೀಕ್ಷಕ ಎಸ್.ಎಂ.ಕುರ್ತಕೋಟಿ ಅವರನ್ನು ಉತ್ತರ ಕನ್ನಡ ವಿಭಾಗದ ಕುಮಟ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ವಿಭಾಗ, ನವಲಗುಂದ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಟಿ.ಎಸ್.ಮುನ್ನಾಸಾಬ್ ಅವರನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗ ಘಟಕ 3ರ ಘಟಕ ವ್ಯವಸ್ಥಾಪಕರಾಗಿ ಬಡ್ತಿನೀಡಿ ನಿಯೋಜಿಸಲಾಗಿದೆ.

ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಂ-2 ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಬಿ.ಕೆ. ನಾಗರಾಜ ಅವರನ್ನು ಹುಬ್ಬಳ್ಳಿ ಗ್ರಾಮಾಂತರ ಘಟಕ-1ಕ್ಕೆ ಘಟಕ ವ್ಯವಸ್ಥಾಪಕರಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಹಾವೇರಿ ವಿಭಾಗ, ವಿಭಾಗೀಯ ಕಚೇರಿಯಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಗುರುಬಸಪ್ಪ ಅಡರಕಟ್ಟಿ ಅವರನ್ನು ಹಾವೇರಿ ಘಟಕದ ಘಟಕ ವ್ಯವಸ್ಥಾಪಕರಾಗಿ ನಿಯೋಜನೆ ಮಾಡಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿದ್ದಾರೆ.

ಬಾಗಲಕೋಟೆ ವಿಭಾಗದ ಬಾದಾಮಿ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಈಶಪ್ಪ ಎಸ್. ನಾಯ್ಕರ ಅವರನ್ನು ಬಾಗಲಕೋಟ ವಿಭಾಗದ ಬೀಳಗಿ ಘಟಕದ ಘಟಕ ವ್ಯವಸ್ಥಾಪಕರಾಗಿ ಬಡ್ತಿಯೊಂದಿಗೆ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.

ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಸುನೀಲ ಟಿ.ಹೊನವಾಡ ಅವರನ್ನು ಚಿಕ್ಕೋಡಿ ವಿಭಾಗದ ಗೋಕಾಕ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ಬಡ್ತಿಯೊಂದಿಗೆ ನಿಯೋಜಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ಹುಬ್ಬಳ್ಳಿ ಬಿಆರ್‌ಟಿಎಸ್‌ನಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಸಂತೋಷ ಬೆನಕನಕೊಪ್ಪ ಅವರನ್ನು ಬೆಳಗಾವಿ ವಿಭಾಗದ ಖಾನಾಪುರ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ಮುಂಬಡ್ತಿಯೊಂದಿಗೆ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಈ ಎಲ್ಲ ಸಿಬ್ಬಂದಿಯವರ ಕಾರ್ಯ ಕ್ಷೇತ್ರದಲ್ಲಿ ಬದಲಾವಣೆ ಇರುವ ಸಿಬ್ಬಂದಿಗಳು ಮಾತ್ರ ನಿಯಮಾನುಸಾರ ನಿಯೋಜನಾ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಮುಂದುವರಿದಂತೆ, ಈ ಬಡ್ತಿಯು ವರಿಷ್ಠತಾ ಪಟ್ಟಿಯ ಪರಿಷ್ಕರಣೆಯಿಂದ ಹಾಗೂ ಜೇಷ್ಠತೆಯಲ್ಲಿ ಹಿರಿಯರಿರುವ ಯಾರಾದರೂ ಪೂರ್ವಾನ್ವಯ ಬಡ್ತಿಗೆ ಅರ್ಹತೆ ಪಡೆದುಕೊಂಡಲ್ಲಿ, ಜೇಷ್ಠತಾ ಪಟ್ಟಿಯಲ್ಲಿ ಕಿರಿಯರಿರುವ ಅಧಿಕಾರಿಗಳನ್ನು ಹಿಂಬಡ್ತಿಗೊಳಿಸುವ ಷರತ್ತಿಗೊಳಪಟ್ಟಿದೆ.

ಈ ಸಿಬ್ಬಂದಿಯವರು ಪದೋನ್ನತಿ ಮೇರೆಗೆ ನಿಯೋಜನೆಗೊಂಡ ಸ್ಥಳದಲ್ಲಿ ಕೂಡಲೇ ವರದಿ ಮಾಡಿಕೊಳ್ಳತಕ್ಕದ್ದು. ಒಂದು ವೇಳೆ ಬಡ್ತಿಯನ್ನು ಒಪ್ಪಿಕೊಳ್ಳದೇ ಇದ್ದಲ್ಲಿ ಬಡ್ತಿ ನಿರಾಕರಣೆಯ ಮನವಿಯನ್ನು ಏಳು(7) ದಿನಗಳೊಳಗಾಗಿ ಕೇಂದ್ರ ಕಚೇರಿಗೆ ಸಲ್ಲಿಸತಕ್ಕದ್ದು. ಇಂತಹ ಪ್ರಕರಣಗಳನ್ನು ಸುತ್ತೋಲೆ ಸಂಖ್ಯೆ: 1344, 17-05-2006ರ ಅನ್ವಯ ಕ್ರಮ ಕೈಗೊಳ್ಳಲಾಗುವುದು.

ಮುಂದುವರಿದಂತೆ, ಬಡ್ತಿ ಆದೇಶ ಹೊರಡಿಸಿದ ದಿನಾಂಕದಂದು, ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಅಪರಾಧ ಪ್ರಕರಣಗಳು ಬಾಕಿ ಇದ್ದಲ್ಲಿ, ದಂಡನೆ ಚಾಲ್ತಿ ಇದ್ದಲ್ಲಿ ಅಥವಾ ಅಮಾನತಿನಲ್ಲಿದ್ದಲ್ಲಿ ಯಾವುದೇ ಕಾರಣಕ್ಕೂ ಬಡ್ತಿಯ ಆದೇಶವನ್ನು ಜಾರಿಗೊಳಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ