NEWSದೇಶ-ವಿದೇಶನಮ್ಮಜಿಲ್ಲೆ

ಭಾರತೀಯ ಸೇನೆಗೆ ಸೇರುವವರಿಗೆ ಉಚಿತ ತರಬೇತಿ, ವೃತ್ತಿ ಮಾರ್ಗದರ್ಶನ: ಶಿವು

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ದೇಶ ಸೇವೆಯ ಕನಸ್ಸು ಹೊತ್ತು ಸೇನಾಪಡೆಗೆ ಸೇರ ಬಯಸುವ ಯುವಕ/ಯುವತಿಯರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಶಿವು ಸೈನಿಕ್ ಅಕಾಡೆಮಿ ಅಧ್ಯಕ್ಷ ಶಿವು ತಿಳಿಸಿದರು.

ಪಟ್ಟಣದ ಹರವೆ ಮಲ್ಲರಾಜಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಉಚಿತ ವೃತ್ತಿ ತರಬೇತಿ, ಮಾರ್ಗದರ್ಶನ ಕಾರ್ಯಾಗಾರ ಡೆಮೋ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಇದೇ ಜೂನ್ 28 ರಂದು ಕೊಡಗಿನ ಮಡಿಕೇರಿಯಲ್ಲಿ ಭಾರತೀಯ ಸೇನೆಯ ರ‍್ಯಾಲಿ ನಡೆಯಲಿದ್ದು, ಈ ರ‍್ಯಾಲಿಯಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಡೆಮೋ ರ್ಯಾಲಿ ನೀಡಲಾಗುತ್ತಿದೆ. ಈ ರ‍್ಯಾಲಿಯಲ್ಲಿ ಭಾಗಿಯಾಗಲು ವಿದ್ಯಾರ್ಥಿಗಳು ಧೈರ್ಯ ಹಾಗೂ ಸ್ಥೈರ್ಯವನ್ನು ಮೈಗೂಡಿಸಿಕೊಂಡಿರಬೇಕು ಎಂದರು.

ಈ ಎಲ್ಲ ವಿಚಾರಗಳನ್ನು ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದೇವೆ. ಸೇನಾಪಡೆಯತ್ತ ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ನಮ್ಮ ಸಂಸ್ಥೆ ಅನೇಕ ಯೋಜನೆಗಳನ್ನು ಆರಂಭಿಸಿದೆ. ಸೇನಾ ನೇಮಕಾತಿ ರ‍್ಯಾಲಿಯ ಪರೀಕ್ಷೆ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸಲಾಗುತ್ತದೆ ಎಂದು ವಿವರಿಸಿದರು.

ಈ ತರಬೇತಿ ಶಿಬಿರಕ್ಕೆ ನೆರೆ ಜಿಲ್ಲೆ ಮತ್ತು ತಾಲೂಕುಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದು ಅವರಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ ಯುವಕರಲ್ಲಿ ಇದೆ ಎಂದರು.

ಶಿವು ಸೈನಿಕ್ ಅಕಾಡೆಮಿ ಕಾರ್ಯದರ್ಶಿ ಸ್ವಾಮಿ, ಸದಸ್ಯರಾದ ಮಹಾದೇವ್, ರವಿ, ಗಣೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ