NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನಮ್ಮ ಬಸ್‌ – ನಮ್ಮ ಬಸ್‌ ಆಗಿರುವುದಕ್ಕೆ ಬಿಟ್ಟುಬಿಡಿ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಮ್ಮ ಬಸ್‌ ನಮ್ಮ ಬಸ್‌ ಆಗಿರುವುದಕ್ಕೆ ಬಿಟ್ಟುಬಿಡಿ ಎಂದು ಪ್ರಜ್ಞಾವಂತ ನಾಗರಿಕರೊಬ್ಬರು ವಿಡಿಯೋ ಮಾಡಿ ಮನವಿ ಮಾಡಿದ್ದಾರೆ.

ಅಂದರೆ, ಇಂದು ಸಾರಿಗೆ ನಿಗಮದ ಬಸ್‌ಗಳು ಒಂದು ರೀತಿ ಜಾಹೀರಾತು ನೀಡುವ ತಾಣಗಳಾಗಿದ್ದು, ಅದರಲ್ಲೂ ಯುವಕರನ್ನು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಬಸ್‌ಗಳಲ್ಲಿ ಹಾಕುವ ಮೂಲಕ ಸಂಸ್ಥೆಇಂಥ ಹೀನಾಯ ಸ್ಥಿತಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ರೀತಿಯ ಜಾಹೀರಾತುಗಳಿಂದ ಯುವಜನತೆ ದಾರಿ ತಪ್ಪುತ್ತಾರೆ ಎಂಬ ಆತಂಕ ವ್ಯಕ್ತಪಡಿಸಿರುವ ಅವರು, ಈ ಹಿಂದೆ ಇದ್ದ ಎಲ್ಲಾದರೂ ಇರು, ಎಂತಾದರೂ ಇರು,‌ ಎಂದೆಂದಿಗೂ ನೀ ಕನ್ನಡವಾಗಿರು  ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ರಾರಾಜಿಸುತ್ತಿದ್ದ ಸ್ಥಳಗಳಲ್ಲಿ ಬೇಡದ ಜಾಹೀರಾತುಗಳು ಬಂದಿರುವುದು ನೋವಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಇಂಥ ಜಾಹೀರಾತುಗಳನ್ನು ಮೊದಲು ತೆಗೆದುಹಾಕಿ ಈ ಹಿಂದೆ ಇದ್ದ ಕುವೆಂಪು, ಡಿವಿಜಿ ಅವರ ಕವನದ ಸಾಲುಗಳನ್ನು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ