CrimeNEWSನಮ್ಮರಾಜ್ಯ

ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ಉದ್ಯಮಿಯ 5 ಲಕ್ಷ ರೂ.ದೋಚಿದ ಕದೀಮರು

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಉದ್ಯಮಿಯ ಗಮನ ಬೇರೆಡೆ ಸೆಳೆದ ಕಳ್ಳರು 5 ಲಕ್ಷ ರೂಪಾಯಿ ದೋಚಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಅಬೀದ್ ನಾಲತವಾಡ ಎಂಬುವರೆ ಹಣ ಕಳೆದುಕೊಂಡ ಉದ್ಯಮಿಯಾಗಿದ್ದಾರೆ. ನಾಲತವಾಡ ಅವರು ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಹೊರಟಾಗ ಅದನ್ನು ಗಮನಿಸಿದ ಕದೀಮರು ಅವರನ್ನು ಹಿಂಬಾಲಿಸಿಕೊಂಡು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಸಿಬಿಟಿ ಬಳಿ ಇರುವ ಬ್ಯಾಂಕ್‌ವೊಂದರಿಂದ ಅಬೀದ್ 5 ಲಕ್ಷ ರೂಪಾಯಿಯನ್ನು ಡ್ರಾ ಮಾಡಿಕೊಂಡು ಹೊರಟಿದ್ದರು. ಆದರೆ ಈ ವೇಳೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರ್​ನ ಗ್ಲಾಸ್ ಒಡೆದು ಕಳವು ಮಾಡಿ ಪರಾರಿಯಾಗಿದ್ದಾರೆ.

ಈ ಸಂಬಂಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ