CrimeNEWSಬೆಂಗಳೂರು

BMTC: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಎಲೆಕ್ಟ್ರಿಕ್‌ ಬಸ್‌ ಡಿಕ್ಕಿ – ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕ್‌ ಬಸ್‌ ಪಾದಚಾರಿಗೆ ಡಿಕ್ಕಿಹೊಡೆದ ಪರಿಣಾಮ ಆತ ರಸ್ತೆಯಲ್ಲೇ ಉರುಳಿಕೊಂಡು ಹೋಗಿ ಮೃತಪಟ್ಟಿರುವ ಭಯಂಕರ ಅಪಘಾತ ಅವಲಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದೆ.

ಬಿಎಂಟಿಸಿ 30ನೇ ಘಟಕದ ಸ್ವಿಚ್ ಇವಿ ಕಂಪನಿಯು ಗುತ್ತಿಗೆ ಆಧಾರದಲ್ಲಿ ಕಾರ್ಯಚರಣೆ ಮಾಡುತ್ತಿರುವ ಮಾರ್ಗ ಸಂಖ್ಯೆ 285M ಬಸ್‌ ಡಿಕ್ಕಿ ಹೊಡೆದಿದೆ. ಇನ್ನು ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

ಬುಧವಾರ ರಾತ್ರಿ ಸುಮಾರು 9 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವ ಸಂದರ್ಭದಲ್ಲಿ ಅವಲಳ್ಳಿ ಗೇಟ್ ಬಳಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿ 3-4 ಮೀಟರ್‌ ದೂರು ಉರುಳಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ  ಜರುಗಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ