NEWSನಮ್ಮಜಿಲ್ಲೆನಮ್ಮರಾಜ್ಯ

KSRTCEFW ಸಂಘದಿಂದ ನಾಳೆ ಸಾರಿಗೆ ನೌಕರರ 70ಕ್ಕೂ ಹೆಚ್ಚು SSLC -2ನೇPCU ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಕಷ್ಟ- ಸುಖದಲ್ಲಿ ಭಾಗಿಯಾಗುವ KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೌಕರರ 70ಕ್ಕೂ ಹೆಚ್ಚು SSLC ಮತ್ತು ದ್ವಿತೀಯ PCUಯಲ್ಲಿ ಅಧಿಕ ಅಂಕಗಳಿಸಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಜುಲೈ 13ರಂದು ಸಮಾರಂಭ ಆಯೋಜಿಸಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ನಯನ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಾಳೆ ಅಂದರೆ ಜು.13ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಆಯೋಜಿಸಲಾಗಿದೆ ಎಂದು ಸಂಘದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ರುದ್ರೇಶ್ ಎಸ್.ನಾಯಕ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್.ಶ್ರೀನಿವಾಸ್‌ (ವಾಸಣ್ಣ), ಮಾಜಿ ಸಚಿವ ಕೆ.ಗೋಪಾಲಯ್ಯ, ಕೆಎಸ್‌ಆರ್‌ಟಿಸಿ ಎಂಡಿ ವಿ.ಅನ್ಬುಕುಮಾರ್‌, ಸಿಬ್ಬಂದಿ ಮತ್ತು ಜಾಗ್ರತಾ ವಿಭಾಗದ ನಿರ್ದೇಶಕರಾದ ನಂದಿನ ದೇವಿ, ಬಿಎಂಟಿಸಿ ಎಂಡಿ ರಾಮಚಂದ್ರನ್‌ ಸೇರಿದಂತೆ ನಿಗಮಗಳ ಅಧಿಕಾರಿಗಳು ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಹೋದ್ಯೋಗಿ ಸಾರಿಗೆ ಬಂಧುಗಳು, ನಮ್ಮ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಲ್ಲಿ ಸದಸ್ಯತ್ವ ಪಡೆದ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಈ ಸಮಾರಂಭಕ್ಕೆ ಸಂಘಕ್ಕೆ ಅರ್ಜಿ ಹಾಕಿದ ಎಲ್ಲ ನೌಕರರು ಮತ್ತು ಮಕ್ಕಳು ಹಾಗೂ ಸಂಘಟನೆಯ ಮುಖಂಡರ ಜತೆ ಸಮಸ್ತ ಸಾರಿಗೆ ನೌಕರರು ಆಗಮಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಭೈರೇಗೌಡ (ಭೈರಣ್ಣ) ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ