ಬೆಂಗಳೂರು: ಕಳೆದ ಒಂದೆರಡು ತಿಂಗಳುಗಳಿಂದ ನಿರಂತರವಾಗಿ ಒಬ್ಬರಾದ ಮೇಲೆ ಒಬ್ಬರಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಾರಿಗೆ ನಿವೃತ್ತ ನೌಕರರು ಸೇರಿದಂತೆ ನೌಕರರ ವಿವಿಧ ಸಂಘಟನೆಗಳ ಮುಖಂಡರು ಭೇಟಿ ಮಾಡಿ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೆ.15ರಷ್ಟು ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಬಿಡುಗಡೆ ಹಾಗೂ 2024ರ ವೇತನ ಪರಿಷ್ಕರಣೆ ಮಾಡುವಂತೆ ಮನವಿ ಸಲ್ಲಿಸುತ್ತಿದ್ದಾರೆ.
ಸಾರಿಗೆ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅತೀ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೊಂಡೆ ಬರುತ್ತಿದ್ದಾರೆ. ಆದರೆ, ಈವರೆಗೂ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಾಗಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ನಾಳೆ ಅಂದರೆ ಜುಲೈ 15ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲೇ 1.25 ಲಕ್ಷ ಸಾರಿಗೆ ನೌಕರರಿಗೆ ಸಿಎಂ ಸಿಹಿ ಸುದ್ದಿಕೊಡುವರೆ ಎಂಬ ಕುತೂಹಲ ಎಲ್ಲರಲ್ಲೂ ಹೆಚ್ಚಾಗಿದೆ.
ಈ ಹಿಂದಿನಿಂದಲೂ ನೌಕರರು ಮತ್ತು ಸಂಘಟನೆಗಳ ಮುಖಂಡರಿಂದ ಮನವಿ ಸ್ವೀಕರಿಸಿ ಭರವಸೆ ಕೊಡುತ್ತಿರುವ ಸಚಿವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ 2024 ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಮತ್ತು 2020 ಜನವರಿ 1ರಿಂದ ಹೆಚ್ಚಳವಾಗಿರುವ ವೇತನ ಹಿಂಬಾಕಿಯನ್ನು ಕೊಡುವುದಕ್ಕೆ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡೆ ಬರುತ್ತಿದ್ದಾರೆ.
ಈ ಹಿಂದೆ ಹಲವಾರು ಬಾರಿ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ನಡೆದ ಅಧಿಕಾರಿಗಳು ಮತ್ತು ನೌಕರರ ಸಂಘಟನೆಗಳ ಸಭೆಗಳಲ್ಲಿ 2020ರ ವೇತನ ಪರಿಷ್ಕರಣೆಯ ಹಿಂಬಾಕಿಯನ್ನು ನಿವೃತ್ತ ನೌಕರರಿಗೆ ಮುಂದಿನ ತಿಂಗಳು ಮುಂದಿನ ತಿಂಗಳು ಆರನೇ ತಾರೀಖಿನ ಮೇಲ್ಪಟ್ಟು 15ರ ನಂತದ ಆದೇಶ ಮಾಡುತ್ತೇವೆ ಎಂದು ಭರವಸೆ ನೀಡಿಕೊಂಡೆ ಬಂದಿದ್ದಾರೆ. ಅಲ್ಲದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕೂಡ ನೌಕರರ ಪ್ರತಿಭಟನಾ ಧರಣಿ ವೇಳೆ ಮಾತುಕೊಟ್ಟಿದ್ದಾರೆ. ಆದರೆ ಆ ಮಾತುಗಳನ್ನು ಈವರೆಗೂ ಕಾರ್ಯರೂಪಕ್ಕೆ ತಂದಿಲ್ಲ.
ಸಾರಿಗೆ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಜನವರಿ 1ರಿಂದ ಆಗಬೇಕಿದೆ. ಇದರ ಜತೆಗೆ 2020 ಜನವರಿ 1ರಿಂದ ಜಾರಿಯಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಕೊಡುವ ಬಗ್ಗೆಯೂ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಸಲಾಗಿದೆ. ಈ ಬಗ್ಗೆ ಅಂತಿಮಾ ನಿರ್ಧಾರವನ್ನಷ್ಟೇ ತೆಗೆದುಕೊಳ್ಳಬೇಕಿದೆ ಎಂದು ಹೇಳಿಕೊಂಡೆ ಬಂದಿದ್ದಾರೆ.
ಇನ್ನು 1.1.2020ರ ವೇತನ ಅರಿಯರ್ಸ್ ನಿವೃತ್ತ ನೌಕರರಿಗೂ ಸಹ ಪರಿಷ್ಕರಣೆ ಮಾಡಲು ಸಿಎಂ ಒಪ್ಪಿದ್ದು ತ್ವರಿತವಾಗಿ ಆದೇಶವನ್ನು ಹೊರಡಿಸಲಾಗುವುದೆಂದು ಮೂರ್ನಾಲ್ಕು ತಿಂಗಳುಗಳಿಂದಲೂ ಆಶ್ವಾಸನೆ ನೀಡಿಕೊಂಡೆ ಬರುತ್ತಿದ್ದಾರೆ. 2020ರ ಜನವರಿ 1ರಿಂದ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅಂದಿನಿಂದಲೇ ಈ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡಬೇಕು, ಈ ನಡುವೆ ನಿವೃತ್ತರಾದ ನೌಕರರು ಮತ್ತು ಅಧಿಕಾರಿಗಳಿಗೂ ಅವರು ನಿವೃತ್ತಿ ಹೊಂದಿದ ದಿನದವರೆಗೂ ಅದು ಜಮೆಯಾಗಬೇಕು ಎಂಬುವುದಕ್ಕು ಸಚಿವರ ಓಕೆ ಎಂದಿದ್ದಾರೆ.
ಈ 2020ರ ವೇತನ ಹೆಚ್ಚಳದ ಶೇ.15ರಷ್ಟು ಅರಿಯರ್ಸ್ ಕೊಡದೆ ಮತ್ತೆ 2024ರ ವೇತನ ಪರಿಷ್ಕರಣೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ಈ ಹಿಂದೆಯೇ ವ್ಯಕ್ತಪಡಿಸಿದ್ದು, ಅಲ್ಲದೆ ನೌಕರರು ಕೂಡ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ. ಈ ಎಲ್ಲವನ್ನು ಈಗಾಗಲೇ ಪರಿಗಣನೆಗೆ ತೆಗೆದುಕೊಂಡಿದ್ದು ಅಧಿಕಾರಿಗಳು ಮತ್ತು ನೌಕರರಿಗೆ ಒಳ್ಳೆಯದಾಗುವ ನಿಧಾರವನ್ನೇ ತೆಗೆದುಕೊಳ್ಳಲಾಗುವುದು ಎಂಬ ಭರವಸೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ.
ಹೀಗಾಗಿ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ 1.25ಲಕ್ಷ ಸಾರಿಗೆ ನೌಕರರ ಸಮಸ್ಯೆಗಳ ಜತೆಗೆ ಅವರ ಬೇಡಿಕೆಗಳ ಈಡೇರಿಕೆಗಳ ಬಗ್ಗೆಯೂ ಚರ್ಚೆಯಾಗಿ ಅಂತಿಮಾ ತೀರ್ಮಾನ ತೆಗೆದುಕೊಳ್ಳಲು ಸಾರಿಗೆ ಸಚಿವರು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿವರೇ? ಆ ಮೂಲಕ ಕಾಂಗ್ರೆಸ್ ಮುಖಂಡರು ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ನಡೆದುಕೊಂಡಿದೆ ಎಂಬ ಖುಷಿ ಹಂಚಿಕೊಳ್ಳುವರೆ ಎಂದು ನೌಕರರು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ.