NEWSಕೃಷಿನಮ್ಮರಾಜ್ಯ

ರೈತರಿಗೆ ಸೇರಬೇಕಾದ ಶೇ.90ರಷ್ಟು ಸಹಾಯಧನ ಒದಗಿಸಿ: ಸಿಎಂಗೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಶೇ. 90ರಷ್ಟು ಸಹಾಯಧನ‌ ನೀಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.

ಆದರೆ ಪ್ರಸ್ತುತ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಹಾಯಧನವನ್ನು ಹೆಚ್ಚಿಸುವ ಬದಲು ಶೇ. 75ರಿಂದ ಶೇ. 55ಕ್ಕೆ ಇಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಪತ್ರ ಬರೆದಿರುವ ಅವರು, 2023-24ನೇ ಸಾಲಿನಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೈತರಿಗೆ ಶೇ. 75ರಷ್ಟು ಸಹಾಯಧನ ದೊರಕಿತ್ತು. ‌

ಆದರೆ ಪ್ರಸಕ್ತ ಸಾಲಿನಲ್ಲಿ ಶೇ. 55ರಷ್ಟು ಮಾತ್ರ ಸಹಾಯಧನ ನೀಡುವುದಾಗಿ ಇಲಾಖೆಗಳು ಸುತ್ತೋಲೆ ಹೊರಡಿಸಿವೆ. ಇದರಿಂದ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

ರೈತರಿಗೆ ಮೋಸ ಮಾಡುವ ಈ ಆದೇಶವನ್ನು ತಕ್ಷಣವೇ ಹಿಂಪಡೆದು, ರೈತರಿಗೆ ಸೇರಬೇಕಾದ ಶೇ. 90ರಷ್ಟು ಸಹಾಯಧನವನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಬೇಕು.

ಇಲ್ಲವಾದರೆ ರೈತ ಸಂಘಟನೆಗಳೊಂದಿಗೆ ಸೇರಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಪತ್ರದ ಮೂಲಕ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ