ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಯು-ಟರ್ನ್ ನಡೆ ಸಲ್ಲ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಸಂಬಂಧ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿಢೀರ್ ಯು-ಟರ್ನ್ ಹೊಡೆದಿರುವುದು ಆಕ್ಷೇಪಾರ್ಹ ನಡೆಯಾಗಿದೆ. ಕನ್ನಡಿಗರಿಗೆ ಎಸಗಿದ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳ ಉದ್ಯೋಗಗಳಲ್ಲಿನ ಮೀಸಲಾತಿ ನೀಡುವ ಬಗೆಗಿನ ಮಸೂದೆಯ ವಿಚಾರವಾಗಿ ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಉದ್ಯೋಗದಲ್ಲಿ ಮೀಸಲಾತಿ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಈಗ ಯು-ಟರ್ನ್ ಹೊಡೆದಿರುವುದು ಸಲ್ಲ ಎಂದು ಕಿಡಿಕಾರಿದರು.
ಇನ್ನು ಆರಂಭದಲ್ಲಿ ರಾಜ್ಯದ ಖಾಸಗಿ ಉದ್ದಿಮೆಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100ರಷ್ಟು ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ನೀಡಿರುವ ಕುರಿತು ಸಿದ್ದರಾಮಯ್ಯನವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಗಳಲ್ಲೂ ಘೋಷಣೆ ಮಾಡಿದ್ದರು. ಆದರೆ, ಕೆಲವೇ ಸಮಯದಲ್ಲಿ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ಪುನಃ 50% ನಿಂದ 75% ಮೀಸಲಾತಿ ನಿಗದಿಪಡಿಸುವ ಮಸೂದೆಗೆ ಒಪ್ಪಿಗೆ ನೀಡಿರುವುದಾಗಿ ಸಮಜಾಯಿಷಿ ನೀಡಿದ್ದಾರೆ. ಕೊನೆಗೆ ಅದನ್ನೂ ಡಿಲೀಟ್ ಮಾಡಿ ಮಸೂದೆ ಇನ್ನೂ ಸಿದ್ಧತೆಯ ಹಂತದಲ್ಲಿರುವುದಾಗಿ ಸ್ಪಷ್ಟನೆ ಕೊಟ್ಟಿದ್ದಾರೆ. ಸಿದ್ಧತೆಯಲ್ಲಿರುವ ಮಸೂದೆಯ ಬಗ್ಗೆ ಈಗಲೇ ತರಾತುರಿಯಿಂದ ಘೋಷಿಸುವ ಇರಾದೆ ಏನಿತ್ತು ಎಂದು ಪ್ರಶ್ನಿಸಿದರು.
ಇನ್ಕನು ನ್ನಡಿಗರ ಪರ ಎಂದು ಸದಾ ಎದೆಯುಬ್ಬಿಸಿಕೊಂಡು ಹೇಳುವ ಸಿದ್ದರಾಮಯ್ಯನವರು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕೊಡಲು ಏಕೆ ಇಚ್ಛಾಶಕ್ತಿಯನ್ನು ತೋರದೆ ದಿಟ್ಟ ಹೆಜ್ಜೆಯನ್ನು ಇಡದೆ ಹಿಂಜರಿಯುತ್ತಿದ್ದಾರೆ ಏಕೆ ಎಂದರು.
ಖಾಸಗಿ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬುದು ಆಮ್ ಆದ್ಮಿ ಪಕ್ಷದ ಸ್ಪಷ್ಟ ನಿಲುವಾಗಿದೆ. ಪಕ್ಷವು ಸ್ಪರ್ಧಿಸಿರುವ ಅನೇಕ ರಾಜ್ಯಗಳಲ್ಲಿ ಚುನಾವಣೆಗಳಲ್ಲಿನ ಪ್ರಣಾಳಿಕೆಗಳಲ್ಲಿ ಈ ಅಂಶಗಳನ್ನು ಪ್ರಮುಖವಾಗಿ ಘೋಷಿಸಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ 100% ಹಾಗೂ ಖಾಸಗಿ ಉದ್ಯೋಗಗಳಲ್ಲಿ 80% ಮೀಸಲಾತಿ ಒದಗಿಸುತ್ತಿವೆ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಕನ್ನಡಿಗರಿಗೆ ಮೀಸಲಾತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
ಕನ್ನಡಿಗರು ಎಲ್ಲಾ ರೀತಿಯಲ್ಲೂ ಕೌಶಲ್ಯವಂತರಾಗಿದ್ದಾರೆ. ಬುದ್ಧಿವಂತರಾಗಿದ್ದಾರೆ. ಅವರಿಗೆ ಕೇವಲ ಸಿ ಮತ್ತು ಡಿ ದರ್ಜೆಯಲ್ಲಿ ಉದ್ಯೋಗ ಮೀಸಲಿಡುವ ಚರ್ಚೆಯೇ ಅನಗತ್ಯ. ಎಲ್ಲ ಹಂತದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಗಳನ್ನು ಮೀಸಲಿಡಬೇಕು. ಕನ್ನಡಿಗರ ಭೂಮಿಯಲ್ಲಿ ಉದ್ದಿಮೆಗಳನ್ನು ಸ್ಥಾಪಿಸಿಕೊಂಡು ಕನ್ನಡಿಗರನ್ನೇ ಉದ್ಯೋಗಗಳಿಂದ ಹೊರಗಿಟ್ಟರೆ ಹೇಗೆ?
ಕನ್ನಡಿಗರಿಗೆ ಸ್ಕಿಲ್ ಇಲ್ಲ ಎಂಬ ಕಾರಣಗಳು ಕನ್ನಡಿಗರಿಗೆ ಎಸಗುತ್ತಿರುವ ಅವಮಾನವಾಗಿದೆ. ಕನ್ನಡಿಗರು ಹೆಚ್ಚು ಸ್ಕಿಲ್ಡ್ ನೌಕರರಾಗಿರುವುದರಿಂದ ವಿದೇಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಇದು ಕೇವಲ ಬಹು ರಾಷ್ಟ್ರೀಯ ಉದ್ಯಮಿಗಳ ಲಾಬಿಗೆ ರಾಜ್ಯ ಸರ್ಕಾರ ಬಲಿಯಾಗಿರುವುದರ ಉದಾಹರಣೆಯಷ್ಟೇ.
ಉತ್ತರ ಭಾರತದ ಉದ್ಯಮಿಗಳು ಅಲ್ಲಿನ ನೌಕರರನ್ನೇ ಹೆಚ್ಚಾಗಿ ಸೇರಿಸಿಕೊಳ್ಳುವ ಮೂಲಕ ಕರ್ನಾಟಕವನ್ನು ಹಿಂದಿಮಯವಾಗಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆ ಎಲ್ಲಾ ಸ್ಥರಗಳಲ್ಲಿಯೂ ಕನ್ನಡಿಗರನ್ನು ಶೋಷಿಸುತ್ತಿದೆ. ಇದೆಲ್ಲವೂ ಗೊತ್ತಿದ್ದೂ ಕಳೆದ 20 ವರ್ಷಗಳಿಂದ ರಾಜ್ಯವನ್ನಾಳಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಕಟ್ಟುನಿಟ್ಟಿನ ಮೀಸಲಾತಿ ನಿರ್ಣಯ ತೆಗೆದುಕೊಳ್ಳಲು ವಿಫಲವಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.
ರಿಯಲ್ ಎಷ್ಟೇಟ್ ಮಾಫಿಯಾದ ಕಪಿಮುಷ್ಠಿಯಲ್ಲಿರುವ ರಾಜ್ಯ ಸರ್ಕಾರ ಕೇವಲ ಬೆಂಗಳೂರು ವಿಸ್ತರಣೆಯಲ್ಲೇ ಕಾಲ ಕಳೆಯುತ್ತಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ಮೂಲಕ ಕನಕಪುರ, ಚನ್ನಪಟ್ಟಣ ಇತ್ಯಾದಿ ತಮ್ಮ ಹಾಗೂ ತಮ್ಮವರ ಒಡೆತನದ ಹೆಚ್ಚು ಭೂಮಿಯಿರುವ ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸಿಕೊಳ್ಳುವ ಮೂಲಕ ಅಲ್ಲಿನ ಜಾಗಗಳಿಗ ಚಿನ್ನದ ಬೆಲೆ ಕೊಡಿಸುವಲ್ಲೇ ನಿರತರಾಗಿದ್ದಾರೆ.
ರಾಜ್ಯದ ಇತರೆ ಭಾಗದ ಯುವಕರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ತಮಿಳುನಾಡು, ಕೇರಳ ರಾಜ್ಯಗಳು ರಾಜಧಾನಿಗಳ ಜೊತೆಗೆ ಇತರ ಭಾಗಗಳ ನಗರಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುತ್ತಿವೆ. ತಮಿಳುನಾಡಿನಲ್ಲಿ ಹೊಸೂರು, ಸೇಲಂ, ವೆಲ್ಲೂರು, ಈ ರೋಡ್, ಕೊಯಂಬತ್ತೂರು, ಮಧುರೈ ಹಾಗೂ ಕೇರಳ ರಾಜ್ಯವು ತ್ರಿವೇಂಡ್ರಮ್, ಕ್ಯಾಲಿಕಟ್, ಕೊಚ್ಚಿನ್ ಕಣ್ಣೂರು,ಇಡುಕ್ಕಿ ಇತ್ಯಾದಿ ನಗರಗಳನ್ನೇ ಗಮನಿಸಿ. ಎಲ್ಲವೂ ಒಂದಕ್ಕಿಂತ ಒಂದನ್ನು ಮೀರಿಸುವಂತೆ ಅಭಿವೃದ್ಧಿಗಳಾಗಿವೆ.
ಕೈಗಾರಿಕೆಗಳು, ಉತ್ಪಾದನಾ ಘಟಕಗಳನ್ನು ಸಮಾನವಾಗಿ ನಿರ್ಮಿಸುತ್ತಿವೆ. ಇದರಿಂದ ಅಲ್ಲಿನ ರಾಜ್ಯಗಳಲ್ಲಿ ಪ್ರಾದೇಶಿಕ ಸಮಾನತೆ ನಿರ್ಮಾಣವಾಗಿದೆ. ತಮಿಳಿಗರಿಗೆ ತಾಯ್ನೆಲದಲ್ಲೇ ಉದ್ಯೋಗಗಳು ಸಿಗುತ್ತಿವೆ. ಅದೇ ಮಾದರಿಯಲ್ಲಿ ರಾಜ್ಯದ ಇತರ ನಗರಗಳನ್ನು ಅಭಿವೃದ್ಧಿ ಪಡಿಸಬೇಕು. ಕಲ್ಯಾಣ, ಕಿತ್ತೂರು, ಮಧ್ಯ, ಕರಾವಳಿ ಭಾಗಗಳ ಅನೇಕ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವ ನೀಡಬೇಕು ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
ದೆಹಲಿ ಮಾದರಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಉದ್ಯೋಗದಾತರನ್ನು ಸೃಷ್ಟಿ ಮಾಡಬೇಕಿದೆ. ದೆಹಲಿಯಲ್ಲಿ The Entrepreneurship Mindset Curriculum (EMC) ಮೂಲಕ ಲಕ್ಷಾಂತರ ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಸುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಉದ್ಯೋಗದಾತರನ್ನು ಸೃಷ್ಟಿಸಬೇಕಿದೆ. ಇದರಿಂದ ತಾನಾಗೇ ಉದ್ಯೋಗಗಳು ಸೃಷ್ಟಿಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Related
You Might Also Like
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...
KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು
ಅನಾರೋಗ್ಯದ ನಡುವೆಯೂ ಕಚೇರಿಯಿಂದ ಡಿಪೋಗೆ - ಡಿಪೋನಿಂದ ಕಚೇರಿಗೆ ಅಲೆಯುತ್ತಿರು ಚಾಲಕ ವೇತನಕ್ಕಾಗಿ ಚಾಲಕನ ಅಲೆದಾಟ, ಪರದಾಟ ಆರ್ಥಿಕ ಸಂಕಷ್ಟದಲ್ಲಿ ಕುಟುಂಬ-ಆದರೂ ಕರಗದ ಅಧಿಕಾರಿಗಳ ಮನಸ್ಸು ದೊಡ್ಡಬಳ್ಳಾಪುರ:...