CrimeNEWSನಮ್ಮರಾಜ್ಯ

ರಾಜ್ಯದ 30ಕಡೆ ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ- ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿ ಶಾಕ್ ಕೊಟ್ಟಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 30 ಕಡೆ ಭ್ರಷ್ಟ ಅಧಿಕಾರಿಗಳ ಬೇಟೆಯಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಇಬ್ಬರು ಲೋಕಾಯುಕ್ತ ಎಸ್‌ಪಿಗಳ ನೇತೃತ್ವದಲ್ಲಿ ಈ ದಾಳಿ ಮಾಡಲಾಗುತ್ತಿದ್ದು, ರಾಜ್ಯದ ಒಟ್ಟು 12 ಕೇಸ್‌ಗಳಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯದ 30 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ಸದ್ಯ ಪರಿಶೀಲನೆ ಮಾಡುತ್ತಿದ್ದಾರೆ.

ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿಯ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಲವಂತ್ ರಾಥೋಡ್, ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ.ರಾಜಾ, ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್.

ಬೆಂಗಳೂರು ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅಖ್ತಾರ್ ಅಲಿ, ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ನಾಗೇಶ್, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್, ಬೆಂಗಳೂರು ಉತ್ತರ ಉಪವಿಭಾಗದ ಎಫ್‌ಡಿಎ ಟಿ.ಆರ್. ಮಂಜುನಾಥ್ ಮನೆಗಳ ಮೇಲೆ ದಾಳಿ ನಡೆದಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?