NEWSದೇಶ-ವಿದೇಶ

24 ಗಂಟೆ ಉಚಿತ ವಿದ್ಯುತ್‌, ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ, ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಮಹಿಳೆಯರಿಗೆ ತಿಂಗಳಿಗೆ ₹1000: ಆಪ್‌ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಚಂಡೀಗಢ: ಮುಂದಿನ ಅಕ್ಟೋಬರ್‌ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ಹರಿಯಾಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದು, ಪ್ರಚಾರದ ವೇಳೆ ದೆಹಲಿಯಲ್ಲಿ ಈ ಹಿಂದೆ ಘೋಷಿಸಿದಂತೆ ಹಲವು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.

ಹರಿಯಾಣದಲ್ಲಿಂದು ನಡೆದ ಆಮ್‌ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ʻಕೇಜ್ರಿವಾಲ್ ಕಿ ಗ್ಯಾರಂಟಿʼ ಘೋಷಣೆ ಮಾಡಿದ್ದಾರೆ.

ಸುನೀತಾ ಕೇಜ್ರಿವಾಲ್ ಆಪ್ ಹಿರಿಯ ನಾಯಕ ಸಂಜಯ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಇತರ ಆಪ್‌ ನಾಯಕರು ಗ್ಯಾರಂಟಿ ಪತ್ರಗಳನ್ನ ಬಿಡುಗಡೆ ಮಾಡಿದ್ದಾರೆ.

ಆಪ್‌ ಗ್ಯಾರಂಟಿ ಏನು?: 24 ಗಂಟೆ ಉಚಿತ ವಿದ್ಯುತ್‌ ಸರಬರಾಜು, ಪ್ರತಿಯೊಬ್ಬರಿಗೂ ಉಚಿತ ವೈದ್ಯಕೀಯ ಚಿಕಿತ್ಸೆ, ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ನಿರುದ್ಯೋಗ ಯುವಕರಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ಆಪ್‌ ಘೋಷಣೆ ಮಾಡಿದೆ.

ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸುನೀತಾ ಕೇಜ್ರಿವಾಲ್‌, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ದೆಹಲಿ ಮತ್ತು ಪಂಜಾಬ್‌ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಮುಂದುವರಿದು ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಚಿಸಿದ್ದಾರೆಂದು ತಿಳಿಸಿದಾರೆ.

ಕೇಜ್ರಿವಾಲ್‌ ಹುಟ್ಟಿ ಬೆಳೆದಿದ್ದು ಹರಿಯಾಣದ ಹಿಸಾರ್‌ನಲ್ಲಿ. ಇಲ್ಲಿ ಹುಟ್ಟಿದ ಹುಡುಗನೊಬ್ಬ ರಾಷ್ಟ್ರ ರಾಜಧಾನಿಯನ್ನು ಆಳುತ್ತಾನೆ ಅಂತ ಯಾರೊಬ್ಬರು ಸಹ ಕನಸಿನಲ್ಲೂ ಊಹಿಸಿರಲಿಲ್ಲ. ಇದು ಯಾವುದೇ ಪವಾಡಕ್ಕಿಂತ ಕಡಿಮೆಯೇನಿಲ್ಲ. ಅವರು ಇನ್ನೂ ಏನಾದರೂ ಮಹತ್ಕಾರ್ಯ ಮಾಡಬೇಕು ಆ ದೇವರು ಬಯಸಿದ್ದಾನೆ ಎಂದು ಭಾವುಕರಾದರು.

ಇದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ದೆಹಲಿ, ಹರಿಯಾಣ ಮತ್ತು ಗುಜರಾತ್‌ನ ಆಪ್‌ ಅಭ್ಯರ್ಥಿಗಳ ಪರ ಸಕ್ರೀಯವಾಗಿ ಪ್ರಚಾರ ಮಾಡಿದ್ದರು. ಇದೀಗ ಮುಂಬರುವ ವಿಧಾನಸಭಾ ಚುನಾವಣೆಗೆ ಹರಿಯಾಣದ ಎಲ್ಲಾ 90 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಪ್‌ ನಿರ್ಧರಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು