NEWSನಮ್ಮಜಿಲ್ಲೆನಮ್ಮರಾಜ್ಯ

KSRTCಯ 4ನಿಗಮಗಳ ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳಕ್ಕೆ ವೇದಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಶೇ.45 ವೇತನ ಹೆಚ್ಚಳ ಮಾಡುವ ಜತೆಗೆ ಒಪಿಎಸ್ ಮಾದರಿ ಪಿಂಚಣಿ ವ್ಯವಸ್ಥೆಯನ್ನು ವಿಸ್ತರಿಸಬೇಕು. ಅಲ್ಲದೆ ಬಾಕಿ ಇರುವ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೂಡಲೇ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿರುವ ವೇದಿಕೆ, ರಾಜ್ಯ ಸರ್ಕಾರ ಸಾರಿಗೆ ನೌಕರರನ್ನು ಸರ್ಕಾರಿ ನೌಕರರಂತೆ ಭಾವಿಸದೇ‌ ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದೆ.

ಇನ್ನು ಸರಿಸಮಾನ ವೇತನ, ಇತರ ಸೌಲಭ್ಯಗಳಿಲ್ಲ. ನಿವೃತ್ತರಿಗೆ ಪಿಂಚಣಿ ಇಲ್ಲ. ಇದರಿಂದ ಸಾರಿಗೆ ನೌಕರರು ಸೇವೆಯಲ್ಲಿದ್ದಾಗಲೂ ನೆಮ್ಮದಿಯಾಗಿ ಜೀವನ ಸಾಗಿಸಲಿಕ್ಕೆ ಆಗಿಲ್ಲ. ಇನ್ನು ನಿವೃತ್ತಿ ಬದುಕಿಗೆ ಭದ್ರತೆಯೇ ಇಲ್ಲ ಎಂಬ ಭಾವನೆಯಿಂದ ಖಿನ್ನತೆಗೆ ಒಳಗಾಗಿ ಬಳಲು ವಂತಾಗಿದೆ ಎಂದು ಆರೋಪಿಸಿದರು.

ಸರ್ಕಾರ ಏಳನೇ ವೇತನ‌ ಆಯೋಗದಂತೆ ಈಗಾಗಲೇ ಸರ್ಕಾರಿ ನೌಕರರಿಗೆ ಒಟ್ಟಾರೆ ಶೇ.58.5ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಮಾಡಿದೆ. ಇದು ಸರ್ಕಾರದ ಎಲ್ಲ ಇಲಾಖೆ ನಿಗಮ ಮಂಡಳಿಗಳ ನೌಕರರಿಗೆ ಒಳ್ಳೆಯ ವೇತನ ಕಲ್ಪಿಸಿಕೊಟ್ಟಿದೆ.

ಆದರೆ ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆಯೂ ಇಲ್ಲ, ಏಳನೇ ವೇತನ ಆಯೋಗದ ಅನುಷ್ಠಾನವೂ ಇಲ್ಲ. ಇದರಿಂದ ಸದ್ಯಕ್ಕೆ ಸಾರಿಗೆ ನೌಕರರು ಸರ್ಕಾರಿ ನೌಕರರಿಗಿಂತ ಶೇ.45ರಷ್ಟು ಕಡಿಮೆ ವೇತನ ಪಡೆಯುವಂತಾಗಿದೆ. ಇಷ್ಟು ಪ್ರಮಾಣದ ಕಡಿಮೆ ವೇತನದಲ್ಲಿ ಜೀವನ ದುಸ್ತರವಾಗಿದೆ. ಈ ರೀರಿ ನಡೆಸಿಕೊಳ್ಳುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ವೇದಿಕೆ ಹೇಳಿದೆ.

ಇನ್ನು ಒಬ್ಬರ ಕಣ್ಣಿಗೆ ಬೆಣ್ಣೆ ಒಬ್ಬರ ಕಣ್ಣಿಗೆ ಸುಣ್ಣ ಎಂಬಂತೆ ಸರ್ಕಾರ ತಾರತಮ್ಯ ಮಾಡುವುದು ಸಲ್ಲ. ಸರ್ಕಾರ‌ ಈಗಲಾದರೂ ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ರಾಜ್ಯಾಧ್ಯಕ್ಷ ವೈ.ಎಂ. ಶಿವರಡ್ಡಿ, ಉಪಾಧ್ಯಕ್ಷ ರಫೀಕಹಮದ್ ನಾಗನೂರ, ಪ್ರಧಾನ ಕಾರ್ಯದರ್ಶಿ ತಿಪ್ಪೇಶ್ವರ ಅಣಜಿ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು