ನ್ಯೂಡೆಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದೆ. 6 ಬಾರಿ ಪೂರ್ಣಾವಧಿ ಹಾಗೂ ಒಂದು ಬಾರಿ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಈ ಬಾರಿಯ ಕೆಲವು ನಿರೀಕ್ಷೆಗಳು ಮೋದಿ ಸರ್ಕಾರದ ಬಜೆಟ್‌ನಲ್ಲಿ ನಿಜವಾಗುತ್ತಿವೆ. ಈ ಬಜೆಟ್ನಲ್ಲಾದ್ರೂ ಚಿನ್ನ, ಬೆಳ್ಳಿಯ ಬೆಲೆ ಇಳಿಯಬಹುದು ಎಂದುಕೊಂಡಿದ್ದ ಬಂಗಾರ ಪ್ರಿಯರಿಗೆ ಮೋದಿ ಸರ್ಕಾರ ಖುಷಿ ಸುದ್ದಿ ನೀಡಿದೆ.
ಚಿನ್ನ, ಬೆಳ್ಳಿ ಹಾಗೂ ಪ್ಲಾಟಿನಂ ಮೇಲೆ ಶೇಕಡಾ 6.4ರಷ್ಟು ಕಸ್ಟಮ್ಸ್ ಡ್ಯೂಟಿ ಕಡಿತ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಬಜೆಟ್ 2024ರ ಈ ಕಸ್ಟಮ್ಸ್ ಡ್ಯೂಟಿ ಈ ನಡೆ ಭವಿಷ್ಯದಲ್ಲಿ ಬಂಗಾರ, ಬೆಳ್ಳಿ ಹಾಗೂ ಪ್ಲಾಟಿನಂನ ಬೆಲೆಯಲ್ಲಿ ಇಳಿಕೆ ಆಗಲಿದೆ.
2024ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಪ್ರಮುಖವಾಗಿ ಆದಾಯ ತೆರಿಗೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರಲ್ಲ. ಏಂಜಲ್ ಟ್ಯಾಕ್ಸ್ ನಿರ್ಮೂಲನೆಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಇ-ಕಾಮರ್ಸ್ ವ್ಯವಹಾರದ ಮೇಲಿನ ತೆರಿಗೆಯೂ ಇಳಿಕೆ ಮಾಡಲು ತೀರ್ಮಾನ ಮಾಡಲಾಗಿದೆ.
ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದ್ದಾರೆ. ಈಗ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಲಾಗಿದೆ. ಕೌಟುಂಬಿಕ ಪಿಂಚಣಿಗೆ ತೆರಿಗೆ ಮಿತಿ 15 ರಿಂದ 25 ಸಾವಿರಕ್ಕೆ ಏರಿಕೆ 3 ಲಕ್ಷದ ಆದಾಯದವರೆಗೆ ಯಾವುದೇ ರೀತಿ ತೆರಿಗೆ ಇರುವುದಿಲ್ಲ 3 ರಿಂದ 7 ಲಕ್ಷದ ಆದಾಯಕ್ಕೆ ಶೇಕಡ 5ರಷ್ಟು ತೆರಿಗೆ 7 ರಿಂದ 10 ಲಕ್ಷದ ಆದಾಯಕ್ಕೆ ಶೇಕಡ 10ರಷ್ಟು ತೆರಿಗೆ 10 ರಿಂದ 12 ಲಕ್ಷದ ಆದಾಯಕ್ಕೆ ಶೇಕಡ 15ರಷ್ಟು ತೆರಿಗೆ 12 ರಿಂದ 15 ಲಕ್ಷದ ಆದಾಯಕ್ಕೆ ಶೇಕಡ 20 ರಷ್ಟು ತೆರಿಗೆ 15 ಲಕ್ಷಕ್ಕಿಂತ ಹೆಚ್ಚಿನ ಆದಾಯದ ಮೇಲೆ ಶೇಕಡ 30ರಷ್ಟು ತೆರಿಗೆ ವಿಧಿಸಲಾಗುವುದು.
80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನ: ತಮ್ಮ ಬಜೆಟ್ ಭಾಷಣದಲ್ಲಿ ಹಣದುಬ್ಬರವು ಶೇಕಡಾ 4 ರ ಗುರಿಯತ್ತ ಸಾಗುತ್ತಿದೆ ಎಂದು ಹೇಳಿದ ನಿರ್ಮಲಾ ಸೀತಾರಾನ್, PMGKAY ಅನ್ನು ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ, ಇದು 80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.
ವರ್ಷದಲ್ಲಿ 4.1 ಕೋಟಿ ಯುವಜನರಿಗೆ ಉತ್ತೇಜನ: ‘5 ವರ್ಷಗಳಲ್ಲಿ 4.1 ಕೋಟಿ ಯುವಜನರನ್ನು ಕೇಂದ್ರೀಕರಿಸಲು ಐದು ಯೋಜನೆಗಳನ್ನು ಪ್ರಾರಂಭಿಸಲಾಗುವುದು, ಇದಕ್ಕಾಗಿ 2 ಲಕ್ಷ ಕೋಟಿ ರೂಪಾಯಿ ಕೇಂದ್ರ ವೆಚ್ಚವಾಗಲಿದೆ. ಈ ಬಜೆಟ್‌ನಲ್ಲಿ ನಾವು ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಎಂಎಸ್‌ಎಂಇ ಮತ್ತು ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸುತ್ತೇವೆ’ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
ಉದ್ಯೋಗ, ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ 2 ಸಾವಿರ ಕೋಟಿ: ಶಿಕ್ಷಣ ಸಾಲದ ಬಡ್ಡಿಯಲ್ಲಿ ರಿಯಾಯಿತಿ! ಕೇಂದ್ರ ಬಜೆಟ್ 2024-25ನಲ್ಲಿ ಪ್ರತಿ ವರ್ಷ 25,000 ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮಾದರಿ ಕೌಶಲ್ಯ ಸಾಲ ಯೋಜನೆಯನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸುತ್ತದೆ. ದೇಶೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ರೂ 10 ಲಕ್ಷದವರೆಗಿನ ಸಾಲಕ್ಕಾಗಿ ಇ-ವೋಚರ್‌ಗಳನ್ನು ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ 3% ವಾರ್ಷಿಕ ಬಡ್ಡಿ ರಿಯಾಯಿತಿಗಾಗಿ ನೇರವಾಗಿ ನೀಡಲಾಗುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.
ಕೆಲಸಕ್ಕೆ ಸೇರುವವರಿಗೆ ಗುಡ್‌ನ್ಯೂಸ್ !: ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಒಂದು ತಿಂಗಳ ವೇತನವನ್ನು ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೊದಲ ಬಾರಿಗೆ ಉದ್ಯೋಗಿಗಳಿಗೆ, ಒಂದು ತಿಂಗಳ ವೇತನವು 15,000 ರೂಪಾಯಿವರೆಗೆ DBT ಆಗಿರುತ್ತದೆ, ಅರ್ಹತೆಯ ಮಿತಿಯು ತಿಂಗಳಿಗೆ 1 ಲಕ್ಷ ರೂಪಾಯಿ ಆಗಿರಲಿದ್ದು, ಇದರಿಂದ 210 ಲಕ್ಷ ಯುವಕರು ಪ್ರಯೋಜನ ಪಡೆಯಲಿದ್ದಾರೆ ಎಂದು ಹಣಕಾಸು ಸಚಿವರು ಹೇಳಿದರು.
ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು: ಉಚಿತ ಪಡಿತರ ವ್ಯವಸ್ಥೆಯು 5 ವರ್ಷಗಳವರೆಗೆ ಮುಂದುವರಿಯುತ್ತದೆ. ಈ ವರ್ಷ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ. ಉದ್ಯೋಗಕ್ಕಾಗಿ 3 ಪ್ರಮುಖ ಯೋಜನೆಗಳಲ್ಲಿ ಸರ್ಕಾರವು ಕೆಲಸ ಮಾಡುತ್ತದೆ.
ಬಿಹಾರದಲ್ಲಿ 3 ಎಕ್ಸ್‌ಪ್ರೆಸ್‌ವೇಗಳ ಘೋಷಣೆ. ಬಿಹಾರದಲ್ಲಿ ಎಕ್ಸ್‌ಪ್ರೆಸ್‌ವೇಗೆ 26 ಸಾವಿರ ಕೋಟಿ ರೂ. ವಿದ್ಯಾರ್ಥಿಗಳಿಗೆ ಕೌಶಲ್ಯ ಮಾದರಿ ಸಾಲ 7.5 ಲಕ್ಷ ರೂ. ಮೊದಲ ಬಾರಿಗೆ ಉದ್ಯೋಗಿಗಳಿಗೆ ಹೆಚ್ಚುವರಿ ಪಿಎಫ್ ಉದ್ಯೋಗಗಳಲ್ಲಿ ಮಹಿಳೆಯರಿಗೆ ಆದ್ಯತೆ ಬೋಧಗಯಾ-ವೈಶಾಲಿ ಎಕ್ಸ್‌ಪ್ರೆಸ್‌ವೇ ನಿರ್ಮಿಸಲಾಗುವುದು. ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ. ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ದ್ವಿಪಥ ಸೇತುವೆ.
ಬಿಹಾರ ರಾಜ್ಯಕ್ಕೆ ಬಂಪರ್ ಅನುದಾನ!: ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದು, ಇದರ ಜೊತೆಗೆ ಬಿಹಾರದಲ್ಲಿ ಹೆದ್ದಾರಿಗಳ ನಿರ್ಮಾಣಕ್ಕೆ 26,000 ಕೋಟಿ ರೂಪಾಯಿ ನೀಡಲಾಗುವುದು, ಬಿಹಾರದಲ್ಲಿ 21 ಸಾವಿರ ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಸ್ಥಾವರವನ್ನೂ ಘೋಷಿಸಲಾಗಿದೆ. ಇದಲ್ಲದೇ ಬಿಹಾರಕ್ಕೆ ಆರ್ಥಿಕ ನೆರವು ಸಿಗಲಿದೆ. ಆಂಧ್ರಪ್ರದೇಶಕ್ಕೆ ಸುಮಾರು 15 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಸಿಗಲಿದೆ.
3 ಕೋಟಿ ಹೊಸ ಮನೆಗಳ ನಿರ್ಮಾಣ, ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ ಅನುದಾನ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ, ಇದರ ಜೊತೆಗೆ ಮಹಿಳೆಯರಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಇರಿಸಲಿದ್ದು, ಪ್ರಧಾನಮಂತ್ರಿ ಬುಡಕಟ್ಟು ಸುಧಾರಿತ ಗ್ರಾಮ ಅಭಿಯಾನದಡಿ 63000 ಗ್ರಾಮಗಳ 5 ಕೋಟಿ ಆದಿವಾಸಿಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗುವುದು ಎಂದರು.
ಯುವಜನರಿಗೆ ಭರ್ಜರಿ ಗುಡ್‌ನ್ಯೂಸ್!: ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಾಕಾಂಕ್ಷಿಗಳಿಗೆ ಎರಡು ವರ್ಷಗಳವರೆಗೆ ಸರ್ಕಾರವು ಪ್ರತಿ ತಿಂಗಳು 300 ರೂಪಾಯಿಗಳ ಹೆಚ್ಚುವರಿ ಪಿಎಫ್ ನೀಡುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು 10 ಲಕ್ಷ ರೂ.ವರೆಗೆ ಅಸುರಕ್ಷಿತ ಶಿಕ್ಷಣ ಸಾಲ ಲಭ್ಯವಿರುತ್ತದೆ. ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. 30 ಲಕ್ಷ ಯುವಕರು ತರಬೇತಿ ಪಡೆಯಲಿದ್ದಾರೆ. ಇದಕ್ಕಾಗಿ ಬಜೆಟ್ ನಲ್ಲಿ 2 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಲಾಗಿತ್ತು.
ಕೇಂದ್ರ ಸರ್ಕಾರವು 4.1 ಕೋಟಿ ಯುವಕರಿಗೆ ಉದ್ಯೋಗಕ್ಕಾಗಿ ಐದು ಯೋಜನೆಗಳನ್ನು ತರಲಿದೆ. ಸರಕಾರ ಮುಂಬರುವ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ನೀಡಲಿದೆ. ಮುಂದಿನ 5 ವರ್ಷಗಳಲ್ಲಿ 1 ಕೋಟಿ ಯುವಜನರಿಗೆ ಸರ್ಕಾರ ಇಂಟರ್ನ್‌ಶಿಪ್ ನೀಡಲಿದೆ. ಒಂದು ವರ್ಷದ ಇಂಟರ್ನ್‌ಶಿಪ್‌ನಲ್ಲಿ ಪ್ರತಿ ತಿಂಗಳು 5000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು.
ಐದು ಕೋಟಿ ಆದಿವಾಸಿಗಳಿಗೆ ಅನುಕೂಲ: ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ ಬುಡಕಟ್ಟು ಉನ್ನತ ಗ್ರಾಮ ಅಭಿಯಾನವನ್ನು ಪ್ರಾರಂಭಿಸಲಾಗುವುದು. ಬುಡಕಟ್ಟು ಪ್ರಾಬಲ್ಯದ ಹಳ್ಳಿಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಈ ಯೋಜನೆಯು ಸ್ಯಾಚುರೇಶನ್ ವ್ಯಾಪ್ತಿಯನ್ನು ಸಾಧಿಸುತ್ತದೆ. ಇದರಿಂದ 63,000 ಗ್ರಾಮಗಳು ವ್ಯಾಪ್ತಿಗೆ ಬರಲಿದ್ದು, 5 ಕೋಟಿ ಬುಡಕಟ್ಟು ಜನರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ: ಬಜೆಟ್‌ನಲ್ಲಿ ಎಂಎಸ್‌ಎಂಇಗಳು ಮತ್ತು ಉತ್ಪಾದನೆಗೆ ವಿಶೇಷ ಗಮನ ನೀಡಲಾಗಿದೆ. MSMEಗಳು ತಮ್ಮ ಒತ್ತಡದ ಅವಧಿಯಲ್ಲಿ ಬ್ಯಾಂಕ್ ಸಾಲವನ್ನು ಮುಂದುವರಿಸಲು ಅನುಕೂಲವಾಗುವಂತೆ ಬಜೆಟ್‌ನಲ್ಲಿ ಹೊಸ ವ್ಯವಸ್ಥೆಗಳನ್ನು ಘೋಷಿಸಲಾಗಿದೆ. ಅಲ್ಲದೇ ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಮೊಬೈಲ್ ಫೋನ್ ಚಾರ್ಜರ್‌ಗಳು ಅಗ್ಗ!: ಬಜೆಟ್‌ನಲ್ಲಿ ಗುಡ್‌ನ್ಯೂಸ್ ಸಿಕ್ಕಿದೆ. ಇನ್ಮುಂದೆ ಮೊಬೈಲ್ ಫೋನ್ ಚಾರ್ಜರ್ ಅಗ್ಗವಾಗಲಿದೆ. ಇದಲ್ಲದೇ ವಿದ್ಯುತ್ ತಂತಿಗಳು ಮತ್ತು ಎಕ್ಸ್ ರೇ ಯಂತ್ರಗಳು ಅಗ್ಗವಾಗಲಿದೆ. ಮೂರು ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ.
ಗುಡ್‌ನ್ಯೂಸ್! ಚಿನ್ನ-ಬೆಳ್ಳಿ ಬೆಲೆ ಇಳಿಕೆ!: ಬಂಗಾರ ಪ್ರಿಯರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿನ್ನ ಬೆಳ್ಳಿಯ ಮೇಲಿನ ದರವನ್ನು ಇಳಿಕೆ ಮಾಡಿ ಘೋಷಿಸಿದ್ದಾರೆ. ಅಂದರೆ ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗಿದ್ದು, ಈ ಹಿನ್ನೆಲೆ ಬಂಗಾರ ಬೆಳ್ಳಿಯ ದರ ಕಡಿಮೆಯಾಗಲಿದೆ.
ಒಟ್ಟಾರೆ ಬಜೆಟ್ ಪ್ರಮುಖ ಅಂಶಗಳನ್ನು ನೋಡುವುದಾದರೆ: * 1.52 ಲಕ್ಷ ಕೋಟಿ ರೂ. ಹಣ ಕೃಷಿ ವಲಯಕ್ಕೆ ಮೀಸಲು * ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ನಡೆಸಲು ಯೋಜನೆ * ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನ 5 ರಾಜ್ಯಗಳಲ್ಲಿ ನೀಡಲು ಕೇಂದ್ರ ಸಿದ್ದತೆ * ಸಹಜ ಕೃಷಿಗೆ ಆದ್ಯತೆ ನೀಡಲು ಸರ್ಕಾರದ ಸರ್ವ ಕ್ರಮ * ತರಕಾರಿ ಬೆಳೆಗಳ ಉತ್ಪಾದನೆ, ಸಂಗ್ರಹ ಉತ್ತೇಜನಕ್ಕಾಗಿ ರೈತರಿಗೆ ನೆರವು
-
ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ * ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮುಂದಿನ 5 ವರ್ಷಕ್ಕೆ ವಿಸ್ತರಣೆ * ಉದ್ಯೋಗ, ಎಂಎಸ್‌ಎಂಇ ಹಾಗೂ ಮಧ್ಯಮ ವರ್ಗದವರನ್ನು ಗುರಿಯಾಗಿಸಿ ಹಲವು ಯೋಜನೆ * ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ
-
ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ * ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು * ಕೇಂದ್ರ ಬಜೆಟ್‌ನಲ್ಲಿ ಒಟ್ಟು 9 ಅಂಶಗಳಿಗೆ ಆದ್ಯತೆ * ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆ, ನಗರ ಅಭಿವೃದ್ಧಿ, ಇಂಧನ ಹಾಗೂ ಸಂಶೋಧನೆಗೆ ಆದ್ಯತೆ