CrimeNEWSನಮ್ಮರಾಜ್ಯಬೆಂಗಳೂರು

BMTC: ಟಿಕೆಟ್‌ ರಹಿತ ಪ್ರಯಾಣಿಕರಿಂದ ₹8.11 ಲಕ್ಷ ದಂಡ ವಸೂಲಿ- ಕಂಡಕ್ಟರ್‌ಗಳ ವಿರುದ್ಧವೂ 1014 ಪ್ರಕರಣಗಳು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಳೆದ ಜೂನ್ ತಿಂಗಳಲ್ಲಿ ವಿವಿಧ ನಿಯಮಗಳ ಉಲ್ಲಂಘನೆ ವಿಚಾರವಾಗಿ 3708 ಪ್ರಯಾಣಿಕರಿಗೆ ದಂಡ (fine) ವಿಧಿಸುವ ಮೂಲಕ ಒಟ್ಟು 8,11,510 ರೂ. ವಸೂಲಿ ಮಾಡಿದೆ ಎಂದು ಬಿಎಂಟಿಸಿ ತನಿಖಾ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮೂಲಕ ಟಿಕೆಟ್ ಇಲ್ಲದೇ ಬಿಟ್ಟಿಯಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಚೋರರರಿಗೆ ಬಿಎಂಟಿಸಿ ಬಿಸಿ ಮುಟ್ಟಿಸಿದ್ದು ಅಲ್ಲದೆ ಇದರಿಂದ ದಂಡ ರೂಪದಲ್ಲಿ ಬಿಎಂಟಿಸಿಗೆ ಲಕ್ಷ ಲಕ್ಷ ರೂಪಾಯಿ ಕೂಡ ಹರಿದು ಬಂದಿದೆ.

ಈ ಬಗ್ಗೆ ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರ ಸೀಟ್​ನಲ್ಲಿ ಕುಳಿತು ಪ್ರಯಾಣಿಸಿದ್ದ ಹಾಗೂ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್​ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಗರಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಜೂನ್​ ತಿಂಗಳಲ್ಲಿ ಒಟ್ಟು 18,378 ಟ್ರಿಪ್​ಗಳನ್ನು ತಪಾಸಣೆ ಮಾಡಿದು ಅದರಲ್ಲಿ 3750 ಟಿಕೆಟ್​ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 7,68,910 ರೂ. ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1014 ಪ್ರಕರಣಗಳನ್ನು ದಾಖಲಿಸಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 426 ಪುರುಷ ಪ್ರಯಾಣಿಕರಿಂದ ಒಟ್ಟು 42,600 ರೂ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಿ ವಸೂಲಿ ಮಾಡಲಾಗಿದೆ ಎಣದು ತಿಳಿಸಿದೆ.

ಒಟ್ಟಾರೆಯಾಗಿ ಜೂನ್ ತಿಂಗಳಲ್ಲಿ 4,176 ಪ್ರಯಾಣಿಕರಿಂದ ಒಟ್ಟು 8,11,510 ರೂ. ದಂಡ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್​, ದಿನದ ಪಾಸು, ವಾರದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದರಿಂದ ಪಾರಾಗಬಹುದು ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು, ಇದರಿಂದ ಮಹಿಳಾ ಪ್ರಯಾಣಿಕರಿಗೂಅನುಕೂಲ ಮತ್ತು ಪರುಷ ಪ್ರಯಾಣಿಕರು ದಂಡ ಕಟ್ಟುವುದು ತಪ್ಪುತ್ತದೆ ಎಂದು ಸಂಸ್ಥೆಯ ತನಿಖಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ