NEWSನಮ್ಮಜಿಲ್ಲೆಸಂಸ್ಕೃತಿ

ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆ ಪುರಸ್ಕಾರಗಳು ನೆರವೇರಿದವು.

ಬೆಳ್ಳಿಯ ಆಭರಣಗಳಲ್ಲಿ ಸರ್ವಾಲಂಕೃತವಾದ ಶ್ರೀ ಚೌಡೇಶ್ವರಿ ಅಮ್ಮನವರಿಗೆ ಮುಂಜಾನೆಯಿಂದಲೇ ಅಭಿಷೇಕ, ಪಂಚಾಮೃತ ಅಭಿಷೇಕ, ಗಂಗಾ ಜಲ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಮಾಡಲಾಯಿತು.

ಸಾಂಸ್ಕೃತಿಕ ಸಂಘಟಕ ವೇದಬ್ರಹ್ಮ ಶ್ರೀ ರವಿ ಶಾಸ್ತ್ರಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಪುರಸ್ಕಾರಗಳು ನಡೆದವು. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಮೊಸರನ್ನ, ಪುಳಿಯೋಗರೆ, ಸಿಹಿ ಪೊಂಗಲ್ ಪ್ರಸಾದವನ್ನು ವಿತರಿಸಲಾಯಿತು.

ಮಹಿಳಾ ಹೋರಾಟಗಾರ್ತಿ, ಸಮಾಜ ಸೇವಕಿ ಪರಿಮಳ ನಾಗರಾಜ ಶೆಟ್ಟಿ ಪೂಜೆಯಲ್ಲಿ ಭಾಗಿಯಾಗಿ, ಒತ್ತಡದ ಜೀವನದಲ್ಲಿ ನಾವು ದೇವರು ಮತ್ತು ಧರ್ಮ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯಬಹುದಾಗಿದೆ ಎಂದರು.

ಇನ್ನು ಸಾಧನೆ ಮಾಡಲು ಕಷ್ಟವಾದರೂ ನ್ಯಾಯ ನೀತಿ ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಲು ಪ್ರಯತ್ನ ಪಡಬೇಕು. ನಾವೆಲ್ಲರೂ ಸಹೋದರತ್ವ ಹಾಗೂ ಸಹಬಾಳ್ವೆಯಿಂದ ದ್ವೇಷ ಅಸುವೆಯನ್ನು ಮರೆತು ಒಂದಾಗಿ ಸಂತೋಷದಿಂದ ಬದುಕು ನಡೆಸಬೇಕು ಎಂದರು.

ಶುಕ್ರವಾರದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ಎಂ. ಚಂದ್ರಶೇಖರ್, ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ ಸುರೇಶ್, ಖಜಾಂಚಿ ಕೆಆರ್ ಮಹೇಶ್, ಗೌರವಾಧ್ಯಕ್ಷ ಕೆ ಆರ್ ನಾಗರಾಜ ಶೆಟ್ಟಿ, ಉದ್ಯಮಿ ಕೆಎಚ್ಆರ್ ಚಂದ್ರಶೇಖರ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಸಿ.ವಾಸು, ಸಮಾಜ ಸೇವಕಿ ಪ್ರೇಮ ಶ್ರೀಕೃಷ್ಣ, ಪುರಸಭೆ ಮಾಜಿ ಸದಸ್ಯೆ ನಾಗರತ್ನಮ್ಮ ಸಿದ್ದಪ್ಪಶೆಟ್ಟಿ, ಕೆಎಸ್ ಮಧುಸೂದನ್ ಸೇರಿದಂತೆ ಸಾವಿರಾರು ಭಕ್ತಾದಿಗಳು ಇದ್ದರು.
ವರದಿ:ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?